ನೆಲ್ಯಾಡಿ: ಕಾಂಕ್ರಿಟೀಕರಣಗೊಂಡ ರಸ್ತೆ ಉದ್ಘಾಟನೆ

0

ನೆಲ್ಯಾಡಿ: ಕಡಬ ತಾಲೂಕಿನ ನೆಲ್ಯಾಡಿ ಗ್ರಾ.ಪಂ.ವ್ಯಾಪ್ತಿಯ ಪಡ್ಡಡ್ಕ-ಹಾರ ರಸ್ತೆ ಕಾಂಕ್ರಿಟೀಕರಣ ಕಾಮಗಾರಿ ಉದ್ಘಾಟನೆ ಇತ್ತೀಚೆಗೆ ನಡೆಯಿತು.
ಸದ್ರಿ ರಸ್ತೆ ನಾದುರಸ್ತಿಯಲ್ಲಿದ್ದು ವಾಹನ ಸಂಚಾರಕ್ಕೆ ಸಮಸ್ಯೆಯಾಗುತಿತ್ತು. ಈ ಹಿನ್ನೆಲೆಯಲ್ಲಿ ನೆಲ್ಯಾಡಿ ಗ್ರಾ.ಪಂ. ಸದಸ್ಯೆ ಉಷಾಜೋಯಿಯವರ ಗ್ರಾ.ಪಂ.ಅನುದಾನದಲ್ಲಿ ಸದ್ರಿ ರಸ್ತೆ ಕಾಂಕ್ರಿಟೀಕರಣ ಮಾಡಲಾಗಿದ್ದು ಇದರ ಉದ್ಘಾಟನೆ ಮಾಡಲಾಯಿತು. ನೆಲ್ಯಾಡಿ ಗ್ರಾ.ಪಂ.ಅಧ್ಯಕ್ಷ ಸಲಾಂ ಬಿಲಾಲ್, ವಾರ್ಡ್‌ನ ಸದಸ್ಯೆ ಉಷಾಜೋಯಿ ಅವರು ಉದ್ಘಾಟಿಸಿದರು. ತಾ.ಪಂ.ಮಾಜಿ ಸದಸ್ಯೆ ಉಷಾಅಂಚನ್, ನೆಲ್ಯಾಡಿ ಗ್ರಾ.ಪಂ.ಸದಸ್ಯ ಅಬ್ದುಲ್ ಜಬ್ಬಾರ್, ಗುತ್ತಿಗೆದಾರ ಶಿವಪ್ರಕಾಶ್, ಕಡಬ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಜೋಸ್ ಕೆ.ಜೆ. ಹಾಗೂ ರಸ್ತೆಯ ಫಲಾನುಭವಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here