







ಪುತ್ತೂರು: ಪಾಣಾಜೆ ರಸ್ತೆಯ ಕೈಕಾರ ಬಳಿ ಪಿಕಪ್ ವಾಹನ ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿ ರಿಕ್ಷಾ ಚಾಲಕ ಗಂಭೀರ ಗಾಯಗೊಂಡ ಘಟನೆ ಫೆ.25 ರಂದು ಮಧ್ಯಾಹ್ನ ನಡೆದಿದೆ.


ಘಟನೆಯಲ್ಲಿ ರಿಕ್ಷಾ ಚಾಲಕ ರಾಮಣ್ಣ ಇರ್ದೆ ಗಂಭೀರ ಗಾಯಗೊಂಡಿದ್ದು, ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.



ಪಿಕಪ್ ವಾಹನ ರಾಂಗ್ ಸೈಡ್ ನಿಂದ ಬಂದು ಆಟೋ ರಿಕ್ಷಾಕ್ಕೆ ಡಿಕ್ಕಿಯಾಗಿದೆ ಎಂದು ಸ್ಥಳೀಯರು ಅಂದಾಜಿಸಿದ್ದಾರೆ.










