







ಪುತ್ತೂರು: ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ “ಮಾನಸಿಕ ಆರೋಗ್ಯ ಮತ್ತು ಭಾವನಾತ್ಮಕ ಆರೋಗ್ಯಕರ ಜೀವನ” ಕುರಿತಾಗಿ ಕಾರ್ಯಗಾರ ಕಾಲೇಜಿನ ಐಕ್ಯೂಎಸಿ ಮತ್ತು ಮಹಿಳಾ ಸಬಲೀಕರಣ ಘಟಕದ ವತಿಯಿಂದ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಪುತ್ತೂರಿನ ಹಿರಿಯ ವೈದ್ಯೆ ಡಾ.ಸುಲೇಖ ವರದರಾಜ್ ಮಾತನಾಡಿ, ಮಾನಸಿಕ ಆರೋಗ್ಯ ಮತ್ತು ಭಾವನಾತ್ಮಕ ಆರೋಗ್ಯಕರ ಜೀವನವನ್ನು ಕಾಪಾಡಿಕೊಳ್ಳುವ ಅಗತ್ಯ ಹಾಗೂ ಪ್ರಾಕ್ಟಿಕಲ್ ಆಗಿ ವಿದ್ಯಾರ್ಥಿಗಳು ಹೇಗೆ ಅಭ್ಯಾಸ ರೂಢಿಸಿಕೊಳ್ಳಬಹುದು ಎಂದು ಮಾಹಿತಿ ನೀಡಿದರು. ಕಾಲೇಜಿನ ಪ್ರಾಂಶುಪಾಲ ಪ್ರೊ. ದಾಮೋದರ ಕಣಜಾಲು ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಮಹಿಳಾ ಸಬಲೀಕರಣ ಘಟಕದ ಸಂಚಾಲಕಿ ಪ್ರೊ.ಮಂಜುಳಾ ದೇವಿ ಕಾರ್ಯಕ್ರಮ ಸಂಯೋಜಿಸಿ ಪ್ರಾಸ್ತಾವಿಕ ಮಾತನಾಡಿದರು. ಐಕ್ಯೂಎಸಿ ಸಂಚಾಲಕ ಪ್ರೊ. ರಾಮಚಂದ್ರ ಡಿ. ಸ್ವಾಗತಿಸಿದರು. ಗ್ರಂಥಾಪಾಲಕ ರಾಮ ಕೆ. ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾಲೇಜಿನ ವಿದ್ಯಾರ್ಥಿಗಳು, ಉಪನ್ಯಾಸಕರು ಭಾಗವಹಿಸಿದರು.












