ಉಪ್ಪಿನಂಗಡಿ: ಶ್ರೀ ಸಹಸ್ರಲಿಂಗೇಶ್ವರ ದೇವಾಲಯದಲ್ಲಿ ಧ್ವಜಾರೋಹಣ

0

ಉಪ್ಪಿನಂಗಡಿ: ಇತಿಹಾಸ ಪ್ರಸಿದ್ಧ ಇಲ್ಲಿನ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಾಲಯದಲ್ಲಿ ಸೋಮವಾರದಂದು ಧ್ವಜಾರೋಹಣ ನಡೆಯಿತು.
ವೇ.ಮೂ. ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಪವಿತ್ರಪಾಣಿ ಕರಾಯ ವಿಷ್ಣುಮೂರ್ತಿ ಕುದ್ದಣ್ಣಾಯರ ಉಪಸ್ಥಿತಿಯಲ್ಲಿ ವೈದಿಕ ವಿಧಿ ವಿಧಾನಗಳೊಂದಿಗೆ ಭಕ್ತಾದಿಗಳು ಕ್ಷೇತ್ರಕ್ಕೆ ಸಮರ್ಪಿಸಿದ ಹಸಿರು ಹೊರೆಕಾಣಿಕೆಗಳನ್ನು ದೇವಾಲಯದ ಧ್ವಜ ಸ್ತಂಭದಲ್ಲಿರಿಸಿ ಧ್ವಜಾರೋಹಣ ನಡೆಸಲಾಯಿತು.


ಈ ಸಂಧರ್ಭದಲ್ಲಿ ದೇವಾಲಯದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಕೆ. ರಾಧಾಕೃಷ್ಣ ನಾಕ್, ಸದಸ್ಯರಾದ ವೆಂಕಪ್ಪ ಪೂಜಾರಿ, ಕೃಷ್ಣ ರಾವ್ ಅರ್ತಿಲ, ದೇವಿದಾಸ್ ರೈ, ದೇವಾಲಯದ ಪ್ರಧಾನ ಅರ್ಚಕ ಹರೀಶ್ ಉಪಾಧ್ಯಾಯ, ಮಾಜಿ ಅಧ್ಯಕ್ಷ ಕರುಣಾಕರ ಸುವರ್ಣ , ಮಾಜಿ ಸದಸ್ಯರಾದ ಡಾ ರಾಜಾರಾಮ ಕೆ.ಬಿ., ಉಷಾ ಮುಳಿಯ, ಪ್ರಮುಖರಾದ ರಾಮಚಂದ್ರ ಮಣಿಯಾಣಿ, ಕೈಲಾರ್ ರಾಜಗೋಪಾಲ ಭಟ್, ಸುಂದರ ಗೌಡ, ಜನಾರ್ದನ ಪೂಜಾರಿ , ಕಿಶೋರ್ ಜೋಗಿ, ರಮೇಶ್ ಬಂಡಾರಿ, ಉಮೇಶ್ ಅಮೀನ್ ಮೊದಲಾದವರು ಉಪಸ್ಥಿತರಿದ್ದರು.
ಸಂಜೆ 7ರಿಂದ ಉತ್ಸವ ನಡೆಯಿತು. ದೇವಾಲಯದ ವ್ಯವಸ್ಥಾಪಕ ವೆಂಕಟೇಶ್ ರಾವ್, ಪದ್ಮನಾಭ ಕುಲಾಲ್, ದಿವಾಕರ ಗೌಡ, ಕೃಷ್ಣ ಪ್ರಸಾದ್ ಬಡಿಲ, ಸುಧಾಕರ ಶೆಟ್ಟಿ ವಿವಿಧ ಕಾರ್ಯಕ್ರಮಗಳಲ್ಲಿ ಸಹಕರಿಸಿದರು.

LEAVE A REPLY

Please enter your comment!
Please enter your name here