






ಪುತ್ತೂರು: ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಫೆ.28ರಂದುಆಚರಿಸಲಾಯಿತು. ಕಾರ್ಯಕ್ರಮವನ್ನು ಉಪ್ಪಿನಂಗಡಿ ಸರಕಾರಿ ಪದವಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಪ್ರೊ. ಮಮತಾ ಬಿ ಆರ್ ದೀಪ ಬೆಳಗಿಸಿ ಉದ್ಘಾಟಿಸಿದರು.



ಕಾಲೇಜಿನ ಗ್ರಂಥಾಲಯ ವಿಭಾಗದಿಂದ ಗ್ರಂಥಪಾಲಕ ರಾಮ ಕೆ ಮಾರ್ಗದರ್ಶನದಲ್ಲಿ ವಿಜ್ಞಾನ ಪುಸ್ತಕಗಳ ಪ್ರದರ್ಶನ ಮತ್ತು “ವಿಜ್ಞಾನ – ವರದಾನ” ಎಂಬ ವಿಷಯದಲ್ಲಿ ಲೇಖನ ಸ್ಪರ್ಧೆಯನ್ನು ಆಯೋಜಿಸಲಾಯಿತು. ಸ್ಪರ್ಧೆಯಲ್ಲಿ ವಿಜೇತರಾದ 6 ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು. ರಾಷ್ಟೀಯ ವಿಜ್ಞಾನ ದಿನದ ಪ್ರಯುಕ್ತ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.




ಸೈಬರ್ ಸೆಕ್ಯೂರಿಟಿ ವಿಷಯದಲ್ಲಿ ಪ್ರೊ. ಮಮತಾ ಬಿ ಆರ್ ಹಾಗೂ ಬಿ.ಎಸ್.ಸಿ ಪದವಿ ವಿದ್ಯಾರ್ಥಿಗಳಿಗೆ ಉದ್ಯೋಗದ ಅವಕಾಶಗಳು ವಿಷಯಕ್ಕೆ ಸಂಬಂಧಿಸಿ ಪ್ರೊ. ಶ್ರೀಕಂಠ ರಾವ್ ಉಪನ್ಯಾಸ ನೀಡಿದರು. ಪ್ರಾಂಶುಪಾಲ ಪ್ರೊ. ದಾಮೋದರ ಕಣಜಾಲು ಅಧ್ಯಕ್ಷತೆ ವಹಿಸಿದ್ದರು. ಐ ಕ್ಯೂ ಎ ಸಿ ಸಂಚಾಲಕ ಪ್ರೊ. ರಾಮಚಂದ್ರ ಡಿ ಉಪಸ್ಥಿತರಿದ್ದರು. ಗಣಿತ ಶಾಸ್ತ್ರ ವಿಭಾಗ ಮುಖ್ಯಸ್ಥೆ ಪ್ರೊ. ಗಾಯತ್ರಿ ಪಿ ಪ್ರಾಸ್ತವಿಕ ನುಡಿಗಳನ್ನಾಡಿದರು ಕು. ಶಿಲ್ಪಾ ಪಿ ಎಸ್ ಸ್ವಾಗತಿಸಿದರು.
ಮರೀನಾ ಮೊಂತೇರೋ ಕಾರ್ಯಕ್ರಮ ನಿರೂಪಿಸಿದರು. ಪ್ರಾಧ್ಯಾಪಕಿ ಪ್ರೊ. ಅಶ್ವಿನಿ ಕೆ ಎನ್ ಅತಿಥಿಗಳನ್ನು ಪರಿಚಯಿಸಿದರು. ದೀಕ್ಷಿತಾ ಧನ್ಯವಾದ ಸಮರ್ಪಸಿದರು.










