ದರ್ಬೆಯಲ್ಲಿ ಪಿಸ್ತೂಲ್ ತೋರಿಸಿ ಬೆದರಿಕೆ : ಪ್ರಕರಣ ದಾಖಲು

0

ಪುತ್ತೂರು: ಬೈಕ್‌ನಲ್ಲಿ ಬಂದ ಸವಾರ ವ್ಯಕ್ತಿಯೊಬ್ಬರಿಗೆ ಪಿಸ್ತೂಲ್ ತೋರಿಸಿ ಬೆದರಿಕೆಯೊಡ್ಡಿರುವ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಕೂರ್ನಡ್ಕ ನಿವಾಸಿ ಅಬ್ದುಲ್ ಹಕೀಂ ದೂರುದಾರರು. ಅವರು ಮಾ.2ರಂದು ದರ್ಬೆಯಲ್ಲಿ ಕಾರು ನಿಲ್ಲಿಸಿ ರಿಕ್ಷಾ ಚಾಲಕರ ಮಧ್ಯೆ ನಡೆದ ಮಾತಿನ ಚಕಮಕಿಯನ್ನು ಸಮಾಧಾನಿಸಿ ಹಿಂತಿರುಗಿ ಹೊರಡುವ ಸಂದರ್ಭ ದ್ವಿಚಕ್ರ ವಾಹನದಲ್ಲಿ ಹೆಲ್ಮೆಟ್ ಧರಿಸದೆ ಬಂದ ಅಪರಿಚಿತ ಸುಮಾರು 30 ವರ್ಷ ಪ್ರಾಯದ ವ್ಯಕ್ತಿಯೊಬ್ಬ ಪಿಸ್ತೂಲ್ ತೋರಿಸಿ ಗುಂಡು ಹೊಡೆಯಲು ಪ್ರಯತ್ನಿಸಿದ್ದು, ಈ ವೇಳೆ ಅಬ್ದುಲ್ ಹಕೀಮ್ ಮತ್ತು ಇತರರು ಸೇರಿ ಆತನನ್ನು ಹಿಡಿಯಲು ಹೋದಾಗ ಅಪರಿಚಿತ ವ್ಯಕ್ತಿ ಬೈಕ್ ಮೂಲಕ ಪರಾರಿಯಾಗಿದ್ದಾನೆ ಎಂದು ಆರೋಪಿಸಲಾಗಿದೆ. ಪಿಸ್ತೂಲ್ ತೋರಿಸಿ ಜೀವ ಬೆದರಿಕೆಯೊಡ್ಡಿದ ಅಪರಿಚಿತ ವ್ಯಕ್ತಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here