






ಪುತ್ತೂರು: ಭಾರತೀಯ ಜನತಾ ಪಾರ್ಟಿ, ದಕ್ಷಿಣ ಕನ್ನಡ ಜಿಲ್ಲಾ ಓಬಿಸಿ ಮೋರ್ಚಾ ಜಿಲ್ಲಾ ಉಪಾಧ್ಯಕ್ಷರಾಗಿ ಕೆಯ್ಯೂರು ಗ್ರಾಪಂ ನಿಕಟಪೂರ್ವ ಸದಸ್ಯ ತಾರಾನಾಥ ಕಂಪರವರನ್ನು ನೇಮಕಗೊಳಿಸಿ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಆದೇಶಿಸಿದ್ದಾರೆ.


ತಾರಾನಾಥ ಕಂಪರವರು ಕೆಯ್ಯೂರು ಗ್ರಾಮದ ಕಂಪ ನಿವಾಸಿ ನಾಟಿ ವೈದ್ಯ ಕಂಪ ರಾಮಣ್ಣ ಪೂಜಾರಿ ಮತ್ತು ಗುಲಾಬಿ ದಂಪತಿಗಳ ಪುತ್ರರಾಗಿದ್ದಾರೆ. ಇವರು ಭಜರಂಗದಳದ ಮಾಜಿ ತಾಲೂಕು ಸಹ ಸಂಚಾಲಕರಾಗಿ, ಭಾರತೀಯ ಜನತಾ ಪಾರ್ಟಿಯ ನಿಷ್ಠಾವಂತ ಕಾರ್ಯಕರ್ತರಾಗಿ, ಕೆಯ್ಯೂರು ಶ್ರೀ ಮಹಿಷಮರ್ದಿನಿ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಯ ಮಾಜಿ ಸದಸ್ಯರಾಗಿ, ಕೆಯ್ಯೂರು ಗ್ರಾಮ ಪಂಚಾಯತ್ನ ನಿಕಟ ಪೂರ್ವ ಸದಸ್ಯರಾಗಿ, ಭಾರತೀಯ ಜನತಾ ಪಾರ್ಟಿ ಕೆಯ್ಯೂರು ಶಕ್ತಿ ಕೇಂದ್ರದ ಕಾರ್ಯದರ್ಶಿಯಾಗಿ ಹೀಗೆ ಹತ್ತು ಹಲವು ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ಕೆದಂಬಾಡಿ ಕೆಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.













