ಎಸ್‌ಡಿಪಿಐ ಬೆಂಬಲಿತ ರಾಮಕುಂಜ ಗ್ರಾ.ಪಂ.ಮಾಜಿ ಸದಸ್ಯೆ ಕಾಂಗ್ರೆಸ್ ಸೇರ್ಪಡೆ

0

ರಾಮಕುಂಜ: ಕಡಬ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ರಾಮಕುಂಜ ಗ್ರಾ.ಪಂ.ನ ಎಸ್‌ಡಿಪಿಐ ಬೆಂಬಲಿತ ಮಾಜಿ ಸದಸ್ಯೆ ಆಯಿಷಾ ಶರೀಫ್ ಅವರು ಎಸ್‌ಡಿಪಿಐ ಪಕ್ಷ ತ್ಯಜಿಸಿ ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತ ಮೆಚ್ಚಿ ಕಡಬ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಭಿಲಾಷ್ ಪಿ.ಕೆ. ಅವರು ಕಾಂಗ್ರೆಸ್ ಪಕ್ಷದ ಧ್ವಜ ನೀಡಿ ಆಯಿಷಾ ಶರೀಫ್ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here