






ನಿಡ್ಪಳ್ಳಿ: ಶ್ರೀಕೃಷ್ಣ ಭಜನಾ ಮಂದಿರ ಮುಡಿಪುನಡ್ಕ ಇದರ 25ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮ ಏ.10ರಂದು ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಮಾ.7 ರಂದು ಭಜನಾ ಮಂದಿರದ ವಠಾರದಲ್ಲಿ ನಡೆಯಿತು.


ಭಜನಾ ಮಂಡಳಿ ಗೌರವಾಧ್ಯಕ್ಷ ನಾಗೇಶ ಗೌಡ ಪುಳಿತ್ತಡಿ, ಅಧ್ಯಕ್ಷ ಜಯಪ್ರಕಾಶ್ ಆಚಾರ್ಯ ಕುಡ್ಚಿಲ, ಕಾರ್ಯದರ್ಶಿ ಷಣ್ಮುಖ ನಾಯ್ಕ ಹೊಸಮಣ್ಣು, ಕೋಶಾಧಿಕಾರಿ ನಾರಾಯಣ ಪೂಜಾರಿ ಮುಡಿಪುನಡ್ಕ, ಬೆಳ್ಳಿ ಹಬ್ಬ ಸಮಿತಿ ಅಧ್ಯಕ್ಷ ಉದ್ಯಮಿ ಜನಾರ್ಧನ ಪೂಜಾರಿ ಪದಡ್ಕ, ಕಾರ್ಯದರ್ಶಿ ಶ್ರೀನಿವಾಸ ಹೊಯಿಗೆ ಗದ್ದೆ ಮತ್ತು ಭಜನಾ ಮಂಡಳಿ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.




ಭಜನಾ ಮಂದಿರದ 25ನೇ ವಾರ್ಷಿಕೋತ್ಸವದಲ್ಲಿ ಬೆಳಿಗ್ಗೆ ಗಣಪತಿ ಹವನ, ಬೆಳ್ಳಿ ಹಬ್ಬದ ಲಾಂಛನ ಬಿಡುಗಡೆ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ ನಡೆಯಲಿದೆ. ರಾತ್ರಿ ಆನ್ ಮಗೆ ಸಾಮಾಜಿಕ ತುಳು ನಾಟಕ ನಡೆಯಲಿದೆ.









