ನೆಲ್ಯಾಡಿ: ಕಾಮಧೇನು ಮಹಿಳಾ ಸಹಕಾರಿ ಸಂಘದಲ್ಲಿ ಮಹಿಳಾ ದಿನಾಚರಣೆ

0

ಪುತ್ತೂರು: ಕಾಮಧೇನು ಮಹಿಳಾ ಸಹಕಾರಿ ಸಂಘ ನಿ. ನೆಲ್ಯಾಡಿ ಇಲ್ಲಿ ಮಹಿಳಾ ದಿನಾಚರಣೆಯನ್ನು ಸಹಕಾರಿ ಸಂಘದ ಸಿಬ್ಬಂದಿಗಳೊಂದಿಗೆ ಹಾಗೂ ಗ್ರಾಹಕರೊಂದಿಗೆ ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಉಷಾ ಅಂಚನ್ ವಹಿಸಿದ್ದರು. ಅಧ್ಯಕ್ಷತೆಯ ಭಾಷಣದಲ್ಲಿ ಮಹಿಳೆಯರು ಸ್ವಾವಲಂಬಿಗಳಾಗಿರಬೇಕು. ಎಲ್ಲಾ ಮಹಿಳೆಯರಿಗೂ ಮಾದರಿಯಾಗಿರಬೇಕು. ಧ್ವನಿ ಎತ್ತಿ ಮಾತನಾಡುವಂತಾಗಬೇಕು ಎಂದರು. ಕಾರ್ಯಕ್ರಮದಲ್ಲಿ ಸಹಕಾರಿ ಸಂಘದ ಮುಖ್ಯ ಕಾರ್ಯದರ್ಶಿ ಚೈತನ್ಯ ಹೆಚ್ ರನ್ನು ಸನ್ಮಾನಿಸಲಾಯಿತು. ಚೈತನ್ಯ ಅವರು ಉಷಾ ಅಂಚನ್ ಅವರಿಗೆ ಧನ್ಯವಾದ ಸಲ್ಲಿಸಿದ್ದರು. ಶ್ವೇತಕುಮಾರಿ ಧನ್ಯವಾದಗೈದರು.

LEAVE A REPLY

Please enter your comment!
Please enter your name here