






ಮಂಗಳೂರು: ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ ವ್ಯವಹಾರ ನಿರ್ವಹಣಾ ವಿಭಾಗದಿಂದ (BBA)ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಜ್ಞಾನ ನೀಡುವ ಉದ್ದೇಶದಿಂದ ಕೈಗಾರಿಕಾ ಭೇಟಿಯನ್ನು ಆಯೋಜಿಸಿದ್ದು ಎರಡು ವಿಭಿನ್ನಬ್ಯಾಚ್ಗಳಲ್ಲಿ ನಡೆಯಿತು.


ದ್ವಿತೀಯ ಬಿಬಿಎ ವಿದ್ಯಾರ್ಥಿಗಳು ಪಣಂಬೂರಿನ ನ್ಯೂ ಮಂಗಳೂರು ಪೋರ್ಟ್ ಅಥಾರಿಟಿ (NMPT)ಗೆ ಭೇಟಿ ನೀಡಿ ಬಂದರಿನ ವಿವಿಧ ವಿಭಾಗಗಳ ಕಾರ್ಯವೈಖರಿ, ಕಾರ್ಗೋ ನಿರ್ವಹಣೆ, ರಫ್ತು-ಆಮದು ಪ್ರಕ್ರಿಯೆಗಳು ಹಾಗೂ ಲಾಜಿಸ್ಟಿಕ್ಸ್ ವ್ಯವಸ್ಥೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ಇದರ ಮೂಲಕ ವಿದ್ಯಾರ್ಥಿಗಳಿಗೆ ಸಾಗಾಣಿಕೆ ಕಾರ್ಯಾಚರಣೆಗಳು ಮತ್ತು ಅಂತರಾಷ್ಟ್ರೀಯ ವ್ಯಾಪಾರದ ಪ್ರಾಯೋಗಿಕ ಅಂಶಗಳ ಕುರಿತು ತಿಳಿದುಕೊಳ್ಳುವ ಅವಕಾಶ ದೊರೆಯಿತು.




ಪ್ರಥಮ ಬಿಬಿಎ ಮತ್ತು ಬಿಬಿಎ ಅನಾಲಿಟಿಕ್ಸ್ ವಿದ್ಯಾರ್ಥಿಗಳು ಕುಲಶೇಖರದಲ್ಲಿರುವ ನಂದಿನಿ ಡೈರಿಗೆ ಭೇಟಿ ನೀಡಿದರು. ಅಲ್ಲಿ ಹಾಲಿನ ಸಂಗ್ರಹಣೆ, ಸಂಸ್ಕರಣೆ, ಗುಣಮಟ್ಟ ಪರಿಶೀಲನೆ, ಪ್ಯಾಕೇಜಿಂಗ್ ಮತ್ತು ವಿತರಣೆ ವ್ಯವಸ್ಥೆಗಳ ಕುರಿತು ಅಧಿಕಾರಿಗಳು ವಿವರಿಸಿದರು. ವಿದ್ಯಾರ್ಥಿಗಳು ಡೈರಿಯ ವಿವಿಧ ವಿಭಾಗಗಳನ್ನು ವೀಕ್ಷಿಸಿ ಉತ್ಪಾದನಾ ನಿರ್ವಹಣೆ ಮತ್ತು ತಂತ್ರಜ್ಞಾನ ಬಳಕೆಯ ಬಗ್ಗೆ ತಿಳಿದುಕೊಂಡರು.










