ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ ಪರಿಸರ ಮತ್ತು ವನ್ಯಜೀವಿಗಳ ಸಂರಕ್ಷಣೆಯ ಕುರಿತು ಜಾಗೃತಿ ಕಾರ್ಯಕ್ರಮ

0

ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ ಇದರ ಆಶ್ರಯದಲ್ಲಿ “ಪರಿಸರ ಮತ್ತು ವನ್ಯಜೀವಿಗಳ ಸಂರಕ್ಷಣೆ (ಹಾವು ಮತ್ತು ನಾವು)” ಎಂಬ ಜಾಗೃತಿ ಕಾರ್ಯಕ್ರಮವನ್ನು ಮಾ.9ರಂದು ಸಂಸ್ಥೆಯ ಉರಿಮಜಲು ರಾಮ್‌ ಭಟ್ ಸಭಾಂಗಣದಲ್ಲಿ ಆಯೋಜಿಸಲಾಯಿತು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಸ್ನೇಕ್ ತೇಜಸ್ ಪುತ್ತೂರು ಅವರು ಉಪಸ್ಥಿತರಿದ್ದು, ವನ್ಯಜೀವಿಗಳ ಸಂರಕ್ಷಣೆ ಹಾಗೂ ಹಾವುಗಳ ಬಗ್ಗೆ ಇರುವ ತಪ್ಪು ಕಲ್ಪನೆಗಳನ್ನು ದೂರ ಮಾಡುವ ಕುರಿತು ವಿದ್ಯಾರ್ಥಿಗಳಿಗೆ ಉಪಯುಕ್ತ ಮಾಹಿತಿಯನ್ನು ನೀಡಿದರು. ಹಾವುಗಳು ಪರಿಸರ ಸಮತೋಲನದಲ್ಲಿ ಮಹತ್ವದ ಪಾತ್ರವಹಿಸುತ್ತವೆ ಎಂಬುದನ್ನು ಅವರು ವಿವರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀನಿವಾಸ್ ಪೆರೋಡಿ ಅವರು ವಹಿಸಿ. ಪರಿಸರ ಸಂರಕ್ಷಣೆಯ ಮಹತ್ವವನ್ನು ತಿಳಿಸಿ ಜಾಗೃತಿ ಮೂಡಿಸಿದರು.ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಂಶುಪಾಲರಾದ ಮುರಳಿಧರ್ ಎಸ್, ಪಾಲಿಟೆಕ್ನಿಕ್ ಆಡಳಿತ ಮಂಡಳಿಯ ನಿರ್ದೇಶಕರಾದ ರವಿಮುಂಗ್ಲಿಮನೆ ಉಪಸ್ಥಿತರಿದ್ದರು.

ಗ್ರಾಮವಿಕಾಸ ಸಮಿತಿ ಪಡ್ಡಾಯೂರು–ಪಡ್ನೂರು ಅಧ್ಯಾಪಕ ಪ್ರತಿನಿಧಿ ವಿನ್ಯಾಸ ಪಿ.ಕೆ. ಅವರು ಸ್ವಾಗತಿಸಿದರು. ರವಿರಾಮ ಎಸ್ ಅವರು ವಂದಿಸಿದರು.

LEAVE A REPLY

Please enter your comment!
Please enter your name here