ಮಾ.14 ನರಿಮೊಗರು ಮುಗೇರಡ್ಕ-ಪೊಸಮೆನ್ಪದವು ಕಲ್ಕುಡ ಕಲ್ಲುರ್ಟಿ ದೈವಸ್ಥಾನದಲ್ಲಿ ನೇಮೋತ್ಸವ

0

ಪುತ್ತೂರು: ನರಿಮೊಗರು ಗ್ರಾಮದ ಮುಗೇರಡ್ಕ-ಪೊಸಮೆನ್ಪದವು ಶ್ರೀ ಕಲ್ಕುಡ ಕಲ್ಲುರ್ಟಿ ದೈವಸ್ಥಾನದಲ್ಲಿ ಕಲ್ಕುಡ ಕಲ್ಲುರ್ಟಿ ಹಾಗೂ ಪರಿವಾರ ದೈವಗಳಿಗೆ ಕಲಶಾಭಿಷೇಕ ಮತ್ತು ವರ್ಷಾವಧಿ ನೇಮೋತ್ಸವವು ಮಾ.14ರಂದು ನಡೆಯಲಿದೆ.


ನೇಮೋತ್ಸವದ ಅಂಗವಾಗಿ ಬೆಳಿಗ್ಗೆ ಗಣಹೋಮ, ನಾಗತಂಬಿಲ, ಪರಿವಾರ ದೈವಗಳಿಗೆ ತಂಬಿಲ, ಸತ್ಯನಾರಾಯಣ ಪೂಜೆ, ಕಲಶಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ ದೈವಗಳ ಭಂಡಾರ ತೆಗೆದ ಬಳಿಕ ಸನ್ಮಾನ ಕಾರ್ಯಕ್ರಮ, ನಂತರ ಗಾಯತ್ರಿ ಮ್ಯೂಸಿಕಲ್ಸ್ನ ಸುಶಾಂತ್ ಆಚಾರ್ಯ ಬಳಗದವರಿಂದ ರಸಮಂಜರಿ ಕಾರ್ಯಕ್ರಮ ನಂತರ ಕಲ್ಕುಡ, ಕಲ್ಲುರ್ಟಿ ದೈವಗಳ ನೇಮ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ನಂತರ ಪಂಜುರ್ಲಿ ಹಾಗೂ ಗುಳಿಗ ದೈವಗಳ ನೇಮೋತ್ಸವ ನಡೆಯಲಿದೆ ಎಂದು ದೈವಸ್ಥಾನದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here