






ನರಿಮೊಗರು: ಮುಂಡೂರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದ ವರ್ಷಾವದಿ ಜಾತ್ರೋತ್ಸವವು ಮಾ.14 ರಿಂದ ಮಾ.16 ರವರೆಗೆ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಯವರ ನೇತೃತ್ವದಲ್ಲಿ ಜರಗಲಿದೆ.



ಮಾ.14ರಂದು ಬೆಳಿಗ್ಗೆ ಶ್ರೀ ದೇವರಿಗೆ ಹಸಿರು ಹೊರೆಕಾಣಿಕೆ ಸಮರ್ಪಣೆ, ಸಂಜೆ ಶ್ರೀ ಸತ್ಯನಾರಾಯಣ ಪೂಜೆ ನಡೆಯಲಿದೆ. ಮಾ.15ರಂದು ಬೆಳಿಗ್ಗೆ ದೇವತಾ ಪ್ರಾರ್ಥನೆ, ಆಚಾರ್ಯವರಣ, ಸ್ವಸ್ತಿ ಪುಣ್ಯಾಹವಾಚನ, ಶ್ರೀ ಮಹಾಗಣಪತಿ ಹೋಮ, ಶ್ರೀ ಮಹಾಮೃತ್ಯುಂಜಯ ಹೋಮ, ಮಧ್ಯಾಹ್ನ ರಕ್ತೇಶ್ವರಿ, ಗುಳಿಗ ದೈವಗಳಿಗೆ ತಂಬಿಲ ಸೇವೆ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ರಾತ್ರಿ ಮಹಾಪೂಜೆ, ಶ್ರೀ ದೇವರ ಬಲಿ ಹೊರಟು ಉತ್ಸವ, ಅನ್ನಸಂತರ್ಪಣೆ, ಸುಡುಮದ್ದು ಪ್ರದರ್ಶನ, ವಸಂತಕಟ್ಟೆ ಪೂಜೆ ನಡೆಯಲಿದೆ.



ಮಾ.16ರಂದು ಬೆಳಿಗ್ಗೆ ಶ್ರೀ ಮಹಾಗಣಪತಿ ಹೋಮ, ಕಲಶ ಪೂಜೆ, ಶ್ರೀ ದೇವರ ಬಲಿ ಹೊರಟು ಉತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ, ಮಧ್ಯಾಹ್ನ ಶ್ರೀ ದೇವರಿಗೆ ಕಲಶಾಭಿಷೇಕ, ಮಹಾಪೂಜೆ, ವೈದಿಕ ಮಂತ್ರಾಕ್ಷತೆ, ಪ್ರಸಾದ ವಿತರಣೆ , ದೈವದ ನೇಮೋತ್ಸವ, ಅನ್ನಸಂತರ್ಪಣೆ, ರಾತ್ರಿ ರಂಗಪೂಜೆ, ಮಹಾಪೂಜೆ ಮತ್ತು ಅನ್ನಸಂತರ್ಪಣೆ, ರಾತ್ರಿ ಕುಣಿತ ಭಜನೆ, ರಂಗಪೂಜೆ, ಮಹಾಪೂಜೆ ಹಾಗೂ ಅನ್ನಸಂತರ್ಪಣೆಯೊಂದಿಗೆ ಜಾತ್ರೋತ್ಸವ ಸಂಪನ್ನಗೊಳ್ಳಲಿದೆ ಎಂದು ಆಡಳಿತಾಧಿಕಾರಿ ಕೆ.ಟಿ. ಗೋಪಾಲ, ಜಾತ್ರೋತ್ಸವ ಸಮಿತಿ ಸಂಚಾಲಕರುಗಳಾದ ಸುಂದರ ಗೌಡ ನಡುಬೈಲು, ಗಂಗಾಧರ ಸುವರ್ಣ ಹಾಗೂ ನೀಲಪ್ಪ ಪೂಜಾರಿ ತಿಳಿಸಿದ್ದಾರೆ.









