






ಪುತ್ತೂರು:ಕೆಮ್ಮಿಂಜೆ ಗ್ರಾಮ ದೈವ ಶ್ರೀ ಶಿರಾಡಿ ರಾಜನ್ ದೈವ ಹಾಗೂ ಪರಿವಾರ ದೈವಗಳ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ಸಾರ್ವಜನಿಕ ಅಶ್ವತ್ಥ ಪೂಜೆ ಹಾಗೂ ಶನಿಪೂಜೆ ಕಾರ್ಯಕ್ರಮ ತಂತ್ರಿಗಳಾದ ಕೆಮ್ಮಿಂಜೆ ಬ್ರಹ್ಮಶ್ರೀ ವೇದಮೂರ್ತಿ ಸುಬ್ರಹ್ಮಣ್ಯ ಬಳ್ಳುಕ್ಕುರಾಯರ ನೇತೃತ್ವದಲ್ಲಿ ಮಾ.15 ರಂದು ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ಜರಗಲಿದೆ.


ಬೆಳಿಗ್ಗೆ ನಾಗತಂಬಿಲ, ಅಶ್ವತ್ಥ ಪೂಜೆ, ಶನಿಪೂಜೆ, ಮಧ್ಯಾಹ್ನ ದೈವತಂಬಿಲ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನೆರವೇರಲಿದೆ. ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಕೆಮ್ಮಿಂಜೆ ಬಯಲು ಗ್ರಾಮ ದೈವ ಶ್ರೀ ಶಿರಾಡಿ ರಾಜನ್ ದೈವಸ್ಥಾನ ಟ್ರಸ್ಟ್ನ ಗೌರವಾಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು, ಸಂಚಾಲಕ ದಯಾನಂದ ಎಂ ಆದರ್ಶ ಆಸ್ಪತ್ರೆ, ಅಧ್ಯಕ್ಷ ಪಿ.ಶ್ರೀಧರ್ ಹೆಗ್ಡೆ ಏಳ್ಮುಡಿ, ಗೌರವ ಸಲಹೆಗಾರರಾದ ಡಾ.ದಿನೇಶ್ ಭಟ್, ಡಾ.ರಮೇಶ್, ಪ್ರಧಾನ ಕಾರ್ಯದರ್ಶಿ ಗಣೇಶ್ ದೇವಾಡಿಗ, ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.












