







ಮಂಗಳೂರು: ಗುರುವಾರ (ಮಾ.19) ಚಂದ್ರದರ್ಶನವಾದ ಹಿನ್ನಲೆಯಲ್ಲಿ ಶುಕ್ರವಾರ (ಮಾ.20) ಕರಾವಳಿಯಾದ್ಯಂತ (ದ.ಕ – ಉಡುಪಿ) ಈದುಲ್ ಫಿತ್ರ್ ಹಬ್ಬವನ್ನು ಆಚರಿಸಲಾಗುತ್ತಿದೆ.


ಚಂದ್ರ ದರ್ಶನ ಹಿನ್ನೆಲೆಯಲ್ಲಿ ಈದುಲ್ ಫಿತರ್ ಹಬ್ಬ ನಡೆಯಲಿರುವುದರಿಂದ ಜಿಲ್ಲೆಯಾದ್ಯಂತ ಶುಕ್ರವಾರ ಸಾರ್ವತ್ರಿಕ ರಜೆ ಘೋಷಿಸಿ ಜಿಲ್ಲಾಧಿಕಾರಿ ದರ್ಶನ್ ಎಚ್ ವಿ ಆದೇಶಿಸಿದ್ದಾರೆ.













