ಪದ್ಮಶ್ರೀ ಹರೇಕಳ ಹಾಜಬ್ಬ ಸೇರಿದಂತೆ ಮೂವರಿಗೆ ಗೌರವ ಡಾಕ್ಟರೇಟ್

0

ಪುತ್ತೂರು: ಪದ್ಮಶ್ರೀ ಪುರಸ್ಕೃತ ಅಕ್ಷರ ಸಂತ ಹರೇಕಳ ಹಾಜಬ್ಬ , ದೈವ‌ ನರ್ತಕ ರವೀಶ್ ಪಡುಮಲೆ ಸೇರಿದಂತೆ ಕೆಲ ದಿನಗಳ ಹಿಂದೆ ನಿಧನರಾದ ಯಕ್ಷಗಾನ ದಿಗ್ಗಜ‌ ಸೂರಿಕುಮೇರು ದಿ.ಗೋವಿಂದ ಭಟ್ (ಮರಣೋತ್ತರ) ಅವರಿಗೆ ಮಂಗಳೂರು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಘೋಷಿಸಿದೆ.

ಮಾ.28ರಂದು ನಡೆಯಲಿರುವ ಮಂಗಳೂರು ವಿಶ್ವವಿದ್ಯಾನಿಲಯದ 44ನೇ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಉನ್ನತ ಶಿಕ್ಷಣ ಸಚಿವ ಡಾ.‌ಎಂ.ಸಿ. ಸುಧಾಕರ್., ಸಂಸದ‌ ಕ್ಯಾ. ಬ್ರಿಜೇಶ್ ಚೌಟ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ ಎಂದು ವಿವಿ ಕುಲಪತಿ ಪ್ರೊ. ಪಿ.ಎಲ್.‌ಧರ್ಮ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here