ಕೇರಳ ವಿಧಾನ ಸಭಾ ಚುನಾವಣೆ : ತ್ರಿಶೂರ್ ಜಿಲ್ಲೆಯ ಕುನ್ನತುನಾಡ್ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ಚುನಾವಣಾ ಉಸ್ತುವಾರಿಯಾಗಿ ಸೂಡ ಅಧ್ಯಕ್ಷ ಕೆ.ಎಂ. ಮುಸ್ತಫ ನೇಮಕ

0


ಪುತ್ತೂರು: ಕೆಪಿಸಿಸಿ ಅಲ್ಪ ಸಂಖ್ಯಾತ ವಿಭಾಗ ರಾಜ್ಯ ಪ್ರದಾನ ಕಾರ್ಯದರ್ಶಿ, ಸುಳ್ಯ ಯೋಜನಾ ಪ್ರಾಧಿಕಾರ ಅಧ್ಯಕ್ಷ ಕೆ.ಎಂ. ಮುಸ್ತಫ ಕೇರಳ ವಿಧಾನ ಸಭೆ ಚುನಾವಣೆ ಹಿನ್ನಲೆಯಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಳ್ಳಲು ಮತ್ತು ಸಂಘಟನಾ ಕಾರ್ಯವನ್ನು ಅವಲೋಕಿಸಲು ಕುನ್ನತ್ ನಾಡ್ ವಿಧಾನ ಸಭಾ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ಉಸ್ತುವಾರಿಯಾಗಿ ನೇಮಕಗೊಂಡಿರುತ್ತಾರೆ.


ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾದ ಹರೀಶ್ ಕುಮಾರ್ ರವರ ನಿರ್ದೇಶನದಂತೆ ಎಐಸಿಸಿ ಕಾರ್ಯದರ್ಶಿ ಪಿವಿ ಮೋಹನ್ ರವರು ನೇಮಿಸಿರುತ್ತಾರೆ ಎಂದು ತಿಳಿಸಿರುತ್ತಾರೆ. ಇತ್ತೀಚೆಗೆ ಮಂಗಳೂರಿನ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಎಐಸಿಸಿ ತರಬೇತುದಾರರಿಂದ ನಡೆದ ತರಬೇತಿ ಶಿಬಿರದಲ್ಲಿ ಮುಸ್ತಫ ಪಾಲ್ಗೊಂಡಿದ್ದರು

LEAVE A REPLY

Please enter your comment!
Please enter your name here