ತಿಂಗಳಾಡಿ: ಕೆದಂಬಾಡಿ ಗ್ರಾಪಂ ಸಭಾಂಗಣದಲ್ಲಿ ರಕ್ತದಾನ ಶಿಬಿರ

0

ಜೀವ ಕೊಡಲು ಸಾಧ್ಯವಿಲ್ಲ ಆದರೆ ರಕ್ತಕೊಟ್ಟು ಜೀವ ಉಳಿಸಬಹುದು: ನವೀನ್ ಭಂಡಾರಿ

ಪುತ್ತೂರು: ಕೆದಂಬಾಡಿ ಗ್ರಾಮ ಪಂಚಾಯತ್, ಆಸರೆ ಸಂಜೀವಿನಿ ಒಕ್ಕೂಟ ಕೆದಂಬಾಡಿ, ಕೆದಂಬಾಡಿ ಕೆಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ತಿಂಗಳಾಡಿ, ಶ್ರೀ ಶಿರಾಡಿ ಭಕ್ತವೃಂದ ಇದ್ಪಾಡಿ, ಯುವರಂಗ ಕೆದಂಬಾಡಿ, ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನ ಕೇಂದ್ರ ಸಂತ ಫಿಲೋಮಿನಾ ಕಾಲೇಜು ಪುತ್ತೂರು, ರೋಟರಿ ಕ್ಲಬ್, ಬ್ಲಡ್ ಬ್ಯಾಂಕ್ ಪುತ್ತೂರು, ರೋಟರ‍್ಯಾಕ್ಟ್ ಕ್ಲಬ್ ತಿಂಗಳಾಡಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಪಿಆರ್‌ಐ, ಸಿಬಿಒ ಕನ್‌ವರ್‌ಜೆನ್ಸಿ ಪ್ರೋಜೆಕ್ಟ್ ಅಡಿಯಲ್ಲಿ ಎಫ್‌ಎನ್‌ಎಚ್‌ಡಬ್ಲೂ ಕಾರ್ಯಕ್ರಮದ ವತಿಯಿಂದ ಮಾ.೩೦ ರಂದು ಕೆದಂಬಾಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ರಕ್ತದಾನ ಶಿಬಿರ ನಡೆಯಿತು.


ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದ ಪುತ್ತೂರು ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿಯವರು ಮಾತನಾಡಿ, ರಕ್ತದಾನ ಎನ್ನುವುದು ಮಾನವೀಯತೆ ಹಾಗೂ ಸೌಹಾರ್ದತೆಗೆ ಸಾಕ್ಷಿಯಾಗುವ ಕಾರ್ಯಕ್ರಮವಾಗಿದೆ. ಇಲ್ಲಿ ಜಾತಿ, ಮತ, ಧರ್ಮ ಇದ್ಯಾವುದು ಗಣನೆಗೆ ಬರುವುದಿಲ್ಲ, ಈ ಭೂಮಿಯಲ್ಲಿ ಪ್ರತಿನಿತ್ಯ ಅಪಘಾತದಿಂದಾಗಿ ರಕ್ತಶ್ರಾವಗೊಂಡು ಸಾವಿರಾರು ಮಂದಿ ಸಾನಪ್ಪುತ್ತಿದ್ದಾರೆ.ಇಂತಹ ಸಂದರ್ಭದಲ್ಲಿ ರಕ್ತದಾನ ಬಹಳಷ್ಟು ಅಗತ್ಯತೆ ಬೀಳುತ್ತದೆ. ನಮಗೆ ಜೀವ ಕೊಡಲು ಸಾಧ್ಯವಿಲ್ಲ ಆದರೆ ರಕ್ತಕೊಟ್ಟು ಜೀವ ಉಳಿಸಲು ಸಾಧ್ಯವಿದೆ ಆದ್ದರಿಂದ ಅಗತ್ಯ ಸಂದರ್ಭಗಳಲ್ಲಿ ರಕ್ತದಾನ ಮಾಡುವುದು ಅತ್ಯಂತ ಒಳ್ಳೆಯ,ಪುಣ್ಯದ ಕೆಲಸವಾಗಿದೆ ಎಂದು ಅವರು ಹೇಳಿ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕೆದಂಬಾಡಿ ಕೆಯ್ಯೂರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಕೃಷ್ಣಕುಮಾರ್ ರೈ ಕೆದಂಬಾಡಿಗುತ್ತು, ರಕ್ತದಾನದಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಬಿ.ಟಿ ಮಹೇಶ್ಚಂದ್ರ ಸಾಲ್ಯಾನ್, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕೆದಂಬಾಡಿ ಗ್ರಾಪಂ ಆಡಳಿತಾಧಿಕಾರಿ ವಿದ್ಯಾರಾಣಿ ಪಿ.ಕೆರವರುಗಳು ಸಂದರ್ಭೋಚಿತವಾಗಿ ಮಾತನಾಡಿದರು. ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್ ಸೆಂಟರ್ ಪುತ್ತೂರು ಇದರ ಮೆಡಿಕಲ್ ಆಫೀಸರ್ ಡಾ.ರಾಮಕೃಷ್ಣ ರಾವ್‌ರವರು ರಕ್ತದಾನದ ಬಗ್ಗೆ ಮಾಹಿತಿ ನೀಡಿದರು.

ವೇದಿಕೆಯಲ್ಲಿ ಕೆದಂಬಾಡಿ ಆಸರೆ ಸಂಜೀವಿನಿ ಒಕ್ಕೂಟದ ಕಾರ್ಯದರ್ಶಿ ಸುನೀತಾ. ಗ್ರಾಮ ಪಂಚಾಯತ್ ಕಾರ್ಯದರ್ಶಿ ಸುರೇಂದ್ರ ರೈ ಇಳಂತಾಜೆ ಉಪಸ್ಥಿತರಿದ್ದರು.
ಪಿಆರ್‌ಐ, ಸಿಬಿಒ ಕನ್‌ವರ್‌ಜೆನ್ಸಿ ಪ್ರೋಜೆಕ್ಟ್‌ನ ತಾಲೂಕು ಸಂಪನ್ಮೂಲ ವ್ಯಕ್ತಿ ವಿದ್ಯಾಶ್ರೀ ಡಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕೆದಂಬಾಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಲಾವಣ್ಯ ಸ್ವಾಗತಿಸಿದರು.ಕವನ ಪ್ರಾರ್ಥಿಸಿದರು. ಆಸರೆ ಸಂಜೀವಿನಿ ಒಕ್ಕೂಟದ ಎಂಬಿಕೆ ಲೀಲಾ ರೈ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಗ್ರಾಪಂ ಸಿಬ್ಬಂದಿಗಳಾದ ಜಯಂತ್ ಮೇರ್ಲ,ಗಣೇಶ್, ವಿದ್ಯಾಪ್ರಸಾದ್, ಮೃದುಳಾ, ಆಸರೆ ಸಂಜೀವಿನಿ ಒಕ್ಕೂಟದ ಎಲ್‌ಸಿಆರ್‌ಪಿ ಜಯಲತಾ, ಪೂರ್ಣಿಮಾ ಸೇರಿದಂತೆ ಸದಸ್ಯರುಗಳು ಸಹಕರಿಸಿದ್ದರು. ಈ ಸಂದರ್ಭದಲ್ಲಿ ಹಲವು ಮಂದಿ ರಕ್ತದಾನ ಮಾಡಿದರು.

LEAVE A REPLY

Please enter your comment!
Please enter your name here