ಮಾ.31: ಶ್ರೀ ರಾಮಕುಂಜೇಶ್ವರ ಪ.ಪೂ.ಕಾಲೇಜಿನ ಉಪನ್ಯಾಸಕ ವಸಂತಕುಮಾರ್ ಸೇವಾನಿವೃತ್ತಿ

0

ರಾಮಕುಂಜ: ಶ್ರೀ ರಾಮಕುಂಜೇಶ್ವರ ಪ.ಪೂ.ಕಾಲೇಜಿನಲ್ಲಿ ಕಳೆದ 36 ವರ್ಷಗಳಿಂದ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ ವಸಂತಕುಮಾರ್ ಡಿ.ಅವರು ಮಾ.31ರಂದು ಸೇವಾ ನಿವೃತ್ತಿಯಾಗಲಿದ್ದಾರೆ.


1989ರಲ್ಲಿ ಶ್ರೀ ರಾಮಕುಂಜೇಶ್ವರ ಪ.ಪೂ.ಕಾಲೇಜಿಗೆ ಉಪನ್ಯಾಸಕರಾಗಿ ಸೇರ್ಪಡೆಗೊಂಡ ವಸಂತಕುಮಾರ್ ಅವರು ಅರ್ಥಶಾಸ್ತ್ರ ಹಾಗೂ ಸಮಾಜಶಾಸ್ತ್ರ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದರು. ಮೂಲತ: ಸುಬ್ರಹ್ಮಣ್ಯ ದೇವರಗದ್ದೆ ನಿವಾಸಿಯಾಗಿರುವ ವಸಂತಕುಮಾರ್ ಅವರು ಸುಬ್ರಹ್ಮಣ್ಯದಲ್ಲಿ ಪ್ರಾಥಮಿಕದಿಂದ ಪದವಿ ತನಕ ಶಿಕ್ಷಣ ಪಡೆದು ಮಂಗಳೂರು ವಿಶ್ವವಿದ್ಯಾಲಯದಿಂದ ಮೂರನೇ ರಾಂಕ್‌ನೊಂದಿಗೆ ಅರ್ಥಶಾಸ್ತ್ರ ಹಾಗೂ ಸೊಲ್ಲಾಪುರದ ಶಿವಾಜಿ ವಿಶ್ವವಿದ್ಯಾಲಯದಿಂದ ಸಮಾಜಶಾಸ್ತ್ರದಲ್ಲಿ ಎಂ.ಎ.ಪದವಿ ಪಡೆದಿದ್ದರು.

ಇವರು ಪ್ರಸ್ತುತ ರಾಮಕುಂಜ ಗ್ರಾಮದ ಆತೂರು ಗಣೇಶನಗರದಲ್ಲಿ ವಾಸ್ತವ್ಯವಿದ್ದು ಇವರ ಪತ್ನಿ ಜ್ಯೋತಿ ಅವರು ಶ್ರೀ ರಾಮಕುಂಜೇಶ್ವರ ಸಂಸ್ಕೃತ ಪಾಠ ಶಾಲೆಯ ಮುಖ್ಯಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರ ಪುತ್ರ ಕಾರ್ತಿಕ್ ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದು ಪುತ್ರಿ ಕೃತಿಕಾ ಅಮೆರಿಕಾದಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

LEAVE A REPLY

Please enter your comment!
Please enter your name here