ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿಯಿಂದ ಅನ್ನದಾನಕ್ಕೆ ಸುವಸ್ತುಗಳ ಸಮರ್ಪಣೆ

0

ಪುತ್ತೂರು: ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಅನ್ನದಾನಕ್ಕೆ ವಸ್ತುರೂಪವಾಗಿ ಎ.4ರಂದು ಸುವಸ್ತುಗಳನ್ನು ಸಮರ್ಪಣೆ ಮಾಡಲಾಯಿತು.
ಅಕ್ಕಿ, ಬೆಲ್ಲ, ಸಕ್ಕರೆ, ಕಡಲೆಬೇಳೆ, ತೊಗರಿಬೇಳೆ, ಕೊತ್ತಂಬರಿ ವಸ್ತುಗಳನ್ನು ಮಹಾಲಿಂಗೇಶ್ವರ ದೇವರಿಗೆ ಸಮರ್ಪಣೆ ಮಾಡಲಾಯಿತು. ದೇವಳದ ಪ್ರಧಾನ ಅರ್ಚಕ ವೇ.ಮೂ.ವಿ.ಎಸ್ ಭಟ್ ಅವರು ಪ್ರಾರ್ಥನೆ ಮಾಡಿದರು. ಈ ಸಂದರ್ಭದಲ್ಲಿ ದೇಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ, ಸಮಿತಿಯ ಸದಸ್ಯರು ಹಾಗು ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here