ಎ.7-11: ಪುಣಚ ಮಹಿಷಮರ್ದಿನಿ ದೇವಸ್ಥಾನದಲ್ಲಿ ಜಾತ್ರೋತ್ಸವ ಸಂಭ್ರಮ- ಎ.10 ದರ್ಶನ ಬಲಿ, ಬಟ್ಟಲುಕಾಣಿಕೆ

0

ಪುಣಚ: ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವು ಎ.7ರಿಂದ ಪ್ರಾರಂಭಗೊಂಡು ಎ.11ರವರೆಗೆ ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಬ್ರಹ್ಮಶ್ರೀ ವರ್ಕಾಡಿ ಗಣೇಶ ತಂತ್ರಿಗಳ ನೇತೃತ್ವದಲ್ಲಿ ವಿಜೃಂಮಣೆಯಿಂದ ನಡೆಯಲಿದೆ.


ಎ.6ರಂದು ಸಂಜೆ ಜಾತ್ರೋತ್ಸವಕ್ಕೆ ಚಾಲನೆ ದೊರೆಯಲಿದ್ದು, ದೇವತಾ ಪ್ರಾರ್ಥನೆ, ಸ್ವಸ್ತಿ ಪುಣ್ಯಾಹ, ವಾಸ್ತು ಹೋಮ ರಾಕ್ಷೋಘ್ನ ಹೋಮ, ವಾಸ್ತು ಬಲಿ, ಮಹಾಪೂಜೆ ನಡೆಯಲಿದೆ.
ಎ.7ರಂದು ಬೆಳಿಗ್ಗೆ ಹಸಿರುವಾಣಿ ಹೊರಕಾಣಿಕೆ ಸಮರ್ಪಣೆ, ಮಹಾಗಣಪತಿ ಹೋಮ, ಧ್ವಜಾರೋಹಣ, ನಿತ್ಯ ಬಲಿ, ರಾತ್ರಿ ಭೂತ ಬಲಿ ಉತ್ಸವ ನಡೆಯಲಿದೆ.
ಎ.8ರಂದು ಬೆಳಗ್ಗೆ ದೀಪ ಬಲಿ, ದರ್ಶನ ಬಲಿ, ರಾತ್ರಿ ಭೂತ ಬಲಿ ಉತ್ಸವ, ಎ.9ರಂದು ಬೆಳಗ್ಗೆ ದೀಪ ಬಲಿ, ದರ್ಶನ ಬಲಿ ರಾತ್ರಿ ಭೂತ ಬಲಿ ಉತ್ಸವ, ಕೆರೆಕಟ್ಟೆ ಉತ್ಸವ, ಎ.10ರಂದು ಬೆಳಗ್ಗೆ ದೀಪ ಬಲಿ, ದರ್ಶನ ಬಲಿ, ಬಟ್ಟಲು ಕಾಣಿಕೆ ಮಹಾಪೂಜೆ, ಅನ್ನಸಂತರ್ಪಣೆ, ರಾತ್ರಿ ಉತ್ಸವ ಬಲಿ, ದರ್ಶನ ಬಲಿ, ಬೆಡಿಕಟ್ಟೆ ಉತ್ಸವ, ಸಿಡಿಮದ್ದು ಪ್ರದರ್ಶನ, ಮೃಗ ಬೇಟೆ ಸವಾರಿ, ನಿತ್ಯಪೂಜೆ, ಶ್ರೀ ಭೂತ ಬಲಿ, ಶಯನ ನಡೆಯಲಿದೆ.


ಎ.11ರಂದು ಬೆಳಗ್ಗೆ ಕವಾಟೋದ್ಘಾಟನೆ, ತೀರ್ಥಪ್ರಸಾದ ವಿತರಣೆ, ತುಲಾಭಾರ ಸೇವೆ, ರಾತ್ರಿ ಪಡುಪೇಟೆ ಸವಾರಿ ಅವಭೃತ ಸ್ನಾನ, ಬಟ್ಟಲು ಕಾಣಿಕೆ, ಧ್ವಜಾವರೋಹಣ ನಡೆದು ಬಳಿಕ ನೆತ್ತರ್ ಕಣ, ವ್ಯಾಘ್ರ ಚಾಮುಂಡಿ ಇತ್ಯಾದಿ ಪರಿವಾರ ದೈವಗಳಿಗೆ ನೇಮೋತ್ಸವ ನಡೆಯಲಿದೆ. ಹಾಗೂ ಜಾತ್ರೋತ್ಸವದಲ್ಲಿ ಪ್ರತಿ ದಿನ ರಾತ್ರಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿರುವುದು ಎಂದು ದೇವಸ್ಥಾನದ ಆಡಳಿತ ಸಮಿತಿಯ ಪ್ರಕಟನೆ ತಿಳಿಸಿದೆ.

LEAVE A REPLY

Please enter your comment!
Please enter your name here