






ರಾಮಕುಂಜ: ಹನುಮಗಿರಿ ಶ್ರೀ ಕೋದಂಡರಾಮ ಪಂಚಮುಖಿ ಆಂಜನೇಯ ಕ್ಷೇತ್ರದಲ್ಲಿ ಏ.9ರಿಂದ 12ರ ತನಕ ನಡೆಯುವ ಅಷ್ಟಬಂದ ಬ್ರಹ್ಮಕಲಶೋತ್ಸವದ ಅಂಗವಾಗಿ ಅಯೋಧ್ಯೆಯಿಂದ ಆಗಮಿಸಿದ ಶ್ರೀರಾಮ ಜ್ಯೋತಿ, ಮೂಲ ಮೃತ್ತಿಕೆ, ಪ್ರಯಾಗರಾಜ್ನ ತ್ರಿವೇಣಿ ಸಂಗಮದಿಂದ ಗಂಗಾಜಲು, ಆಂಜನಾದ್ರಿಯಿಂದ ಹನುಮ ಜ್ಯೋತಿ, ಮೃತ್ತಿಕೆ ಹಾಗೂ ಪಂಪ ಸರೋವರದ ಪವಿತ್ರ ಜಲ ಸಂಗ್ರಹಿಸಿಕೊಂಡು ಸಂಚರಿಸುತ್ತಿರುವ ಶ್ರೀರಾಮ ಹನುಮಜ್ಯೋತಿ ರಥಯಾತ್ರೆ ಏ.5ರಂದು ಸಂಜೆ ಕೊೖಲ ಗ್ರಾಮದ ಆತೂರು ಶ್ರೀ ಸದಾಶಿವ ದೇವಸ್ಥಾನಕ್ಕೆ ಆಗಮಿಸಿತು.


ಭಜನಾ ತಂಡದೊಂದಿಗೆ ಶ್ರೀರಾಮ ಹನುಮ ಜ್ಯೋತಿಯನ್ನು ದೇವಸ್ಥಾನಕ್ಕೆ ಬರಮಾಡಿಕೊಳ್ಳಲಾಯಿತು. ದೇವಸ್ಥಾನದ ಪ್ರಧಾನ ಅರ್ಚಕ ವಿಷ್ಣುಮೂರ್ತಿ ಬಡೆಕ್ಕಿಲ್ಲಾಯ ಅವರು ರಥಕ್ಕೆ ಪೂಜೆ ಸಲ್ಲಿಸಿದರು.



ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನೀರಜ್ಕುಮಾರ್ ರೈ ಅವರು ಮಾಲಾರ್ಪಣೆ ಮಾಡಿ ರಥವನ್ನು ಬರಮಾಡಿಕೊಂಡರು. ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಯದುಶ್ರೀ ಆನೆಗುಂಡಿ, ಉತ್ಸವ ಸಮಿತಿ ಅಧ್ಯಕ್ಷ ಧರ್ಣಪ್ಪ ಗೌಡ ಕೋರಿಕ್ಕಾರು, ಮಾಜಿ ಅಧ್ಯಕ್ಷ ಚಂದ್ರಹಾಸ ರೈ ಬುಡಲ್ಲೂರು, ವ್ಯವಸ್ಥಾಪನಾ ಸಮಿತಿ ಸದಸ್ಯರು, ಉತ್ಸವ ಸಮಿತಿ ಪದಾಧಿಕಾರಿಗಳು, ಸದಸ್ಯರು, ಗ್ರಾಮಸ್ಥರು ರಥಕ್ಕೆ ಪುಷ್ಪಾರ್ಚನೆ ಮಾಡಿದರು.
ಬ್ರಹ್ಮಕಲಶೋತ್ಸವ ಸಮಿತಿ ಉಪಾಧ್ಯಕ್ಷ, ಕೋಟಿ ಶ್ರೀರಾಮ ತಾರಕ ಜಪ ಯಜ್ಷದ ಸಂಚಾಲಕ ಸೀತಾರಾಮ ರೈ ಕೆದಂಬಾಡಿಗುತ್ತು ಅವರು ರಥಯಾತ್ರೆ ಹಾಗೂ ಬ್ರಹ್ಮಕಲಶೋತ್ಸವದ ಕುರಿತು ಮಾಹಿತಿ ನೀಡಿದರು. ಆತೂರು ದೇವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷ ಶೀನಪ್ಪ ಗೌಡ ವಳಕಡಮ ಅವರು ಸ್ವಾಗತಿಸಿ, ವಂದಿಸಿದರು.










