






ಕಾಣಿಯೂರು: ಬೆಳಂದೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ 2025- 2026ನೇ ಸಾಲಿನ ಎನ್ ಎಸ್ ಎಸ್ ಸಮಾರೋಪ ಸಮಾರಂಭವು ಏ.3ರಂದು ಆರೆಲ್ತಡಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.



ಕಾರ್ಯಕ್ರಮದಲ್ಲಿ ಮಾನವ ಸಂಪನ್ಮೂಲ ತರಬೇತುದಾರರಾದ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರಾದ ವಚನ ಜಯರಾಮ್ ಅರುವಗುತ್ತು ಸಮಾರೋಪ ಭಾಷಣವನ್ನು ನೆರವೇರಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಶಂಕರ್ ಭಟ್ ರವರು ಅಧ್ಯಕ್ಷತೆಯನ್ನು ವಹಿಸಿದ್ದರು. ಬೆಳಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಅಭಿವೃದ್ಧಿ ಸಮಿತಿ ಸದಸ್ಯರಾದ ಸೀತಾರಾಮ ಗೌಡ ಮುಂಡಾಳ, ಶೀನಪ್ಪ ಗೌಡ ಬೈತಡ್ಕ, ಪ್ರವೀಣ್ ಕುಂಟ್ಯಾನ, ಪುತ್ತೂರು ಎಪಿಎಂಸಿ ಮಾಜಿ ಅಧ್ಯಕ್ಷ ದಿನೇಶ್ ಮೆದು, ಅರೆಲ್ತಡಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯಗುರು ಶ್ರೀಕಾಂತ್ ನಾಯ್ಕ್, ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷ ಚಂದ್ರಶೇಖರ್ ಪಟ್ಟೆ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ವೇಣುಗೋಪಾಲ ಕಳುವಾಜೆ, ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷೆ ಚಂದ್ರಾವತಿ, ಅಚ್ಯುತ ಗೌಡ ಕಳುವಾಜೆ, ಕೇಶವ ಇಡ್ಯಡ್ಕ, ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರಕಾಶ್ ಕುದ್ಮನಮಜಲು ಉಪಸ್ಥಿತರಿದ್ದರು. ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಳಂದೂರು ಇಲ್ಲಿನ ಎನ್ಎಸ್ಎಸ್ ಶಿಬಿರ ಅಧಿಕಾರಿ ಹರೀಶ್ ಕುಮಾರ್ ಎನ್ ವರದಿ ವಾಚಿಸಿದರು. ಸಹ ಶಿಬಿರಾಧಿಕಾರಿ ವಿನುತ ಸ್ವಾಗತಿಸಿ, ವಿದ್ಯಾರ್ಥಿನಿ ಚೈತ್ರ ವಂದಿಸಿದರು. ವಿದ್ಯಾರ್ಥಿನಿ ಲಾವಣ್ಯ ಕಾರ್ಯಕ್ರಮ ನಿರೂಪಿಸಿದರು.












