ಕುಂಬ್ರ ಸಿಎ ಬ್ಯಾಂಕ್ ಮಾಜಿ ಅಧ್ಯಕ್ಷ, ಬಿಜೆಪಿ ಹಿರಿಯ ನಾಯಕ ಅರಿಯಡ್ಕ ವಿನೋದ್ ಕುಮಾರ್ ಶೆಟ್ಟಿ ನಿಧನ

0

ಅರಿಯಡ್ಕ :ಕುಂಬ್ರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷ, ಹಾಲಿ ನಿರ್ದೇಶಕ ಅರಿಯಡ್ಕ ವಿನೋದ್ ಕುಮಾರ್ ಶೆಟ್ಟಿಯವರು ಅಲ್ಪಕಾಲದ ಅಸೌಖ್ಯದಿದ ನಿಧನರಾದರು.

ಭಾರತೀಯ ಜನತಾ ಪಾರ್ಟಿಯ ಹಿರಿಯ ನಾಯಕರೂ ಆಗಿದ್ದ ಇವರು ಪಕ್ಷವನ್ನು ತಳಮಟ್ಟದಲ್ಲಿ ಕಟ್ಟಿ ಬೆಳೆಸಿದ ಪ್ರಮುಖರಲ್ಲಿ ಓರ್ವರಾಗಿದ್ದರು.ಜೊತೆಗೆ ವಿವಿಧ ಸಂಘ ಸಂಸ್ಥೆಗಳಲ್ಲಿಯೂ ಸಕ್ರಿಯರಾಗಿದ್ದರು.ಅವಿವಾಹಿತರಾಗಿದ್ದ ಮೃತರು ಐವರು ಸಹೋದರರು ಹಾಗೂ ನಾಲ್ವರು ಸಹೋದರಿಯರನ್ನು ಅಗಲಿದ್ದಾರೆ.ಮೃತರ ಅಂತ್ಯ ಸಂಸ್ಕಾರ ಏಪ್ರಿಲ್ 8 ರಂದು ಮಧ್ಯಾಹ್ನ 3 ಗಂಟೆಗೆ ಅರಿಯಡ್ಕ ಸ್ವ ಗೃಹದಲ್ಲಿ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

LEAVE A REPLY

Please enter your comment!
Please enter your name here