







ರಾಮಕುಂಜ: ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆ, ನೇತ್ರಾವತಿ ತುಳುಕೂಟ ರಾಮಕುಂಜ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಗೋಳಿತ್ತೊಟ್ಟು ಹಾಗೂ ಆಲಂಕಾರು ವಲಯ ಇವರ ಸಹಯೋಗದೊಂದಿಗೆ ’ಆವಾರ-ಪುಲಮರ್ದ್‌ದ ಕಜ್ಜಕೊಟ್ಯ’ ಕಾರ್ಯಕ್ರಮ ಏ.6ರಂದು ರಾಮಕುಂಜ ಶ್ರೀ ರಾಮಕುಂಜೇಶ್ವರ ಆಂಗ್ಲಮಾಧ್ಯಮ ಶಾಲಾ ಸಭಾಂಗಣದಲ್ಲಿ ಜರುಗಿತು.



ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದ.ಕ.ಜಿಲ್ಲಾ ನಿರ್ದೇಶಕ ಬಾಬು ನಾಯ್ಕ ಅವರು ಉದ್ಘಾಟಿಸಿ ಮಾತನಾಡಿ, ನಿರ್ದಿಷ್ಟ ಗುರಿಯೊಂದಿಗೆ ಪ್ರಯತ್ನಶೀಲರಾದಾಗ ಉತ್ತಮ ಜೀವನ ನಡೆಸಲು ಸಾಧ್ಯ. ವಿದ್ಯಾರ್ಥಿಗಳೆಲ್ಲರೂ ಉತ್ತಮ ಸಂಸ್ಕಾರವನ್ನು ಬೆಳೆಸಿಕೊಂಡು, ಶಿಬಿರದ ಪ್ರಯೋಜನವನ್ನು ಪಡೆದು ಉತ್ತಮ ವ್ಯಕ್ತಿಗಳಾಗಬೇಕೆಂದು ಹೇಳಿದರು. ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ ರೈ ಅವರು ಮಾತನಾಡಿ, ಅವಿಭಕ್ತ ಕುಟುಂಬದಲ್ಲಿದ್ದ ಬಾಂಧವ್ಯ, ಸಂಪ್ರದಾಯ, ಸಂಸ್ಕೃತಿಯನ್ನು ಮುಂದುವರಿಸಿಕೊಂಡು ಹೋಗುವ ಜವಾಬ್ದಾರಿ ನಮ್ಮಲ್ಲಿದೆ ಎಂದರು.
ಮುಖ್ಯ ಅತಿಥಿಗಳಾಗಿದ್ದ ಜನಜಾಗೃತಿ ವೇದಿಕೆ ಕಡಬ ತಾಲೂಕು ಅಧ್ಯಕ್ಷ ಕೆ.ಮಹೇಶ್ ಸವಣೂರು ಮಾತನಾಡಿ, ನಮ್ಮ ಸಂಪ್ರದಾಯ, ಸಂಸ್ಕೃತಿ ಉಳಿಯಬೇಕಾದರೆ ವಿದ್ಯಾರ್ಥಿಗಳು ಉತ್ತಮ ಸಂಸ್ಕಾರವನ್ನು ಬೆಳೆಸಿಕೊಳ್ಳಬೇಕು ಎಂದರು.



ಗೋಳಿತ್ತೊಟ್ಟು ವಲಯ ಜನಜಾಗೃತಿ ವೇದಿಕೆ ಸದಸ್ಯ ವೀರೇಂದ್ರ ಪಾಲೆತ್ತಡ್ಡ ಮಾತನಾಡಿ, ವಿದ್ಯಾರ್ಥಿಗಳು ಬೇಸಿಗೆ ಶಿಬಿರದ ಪ್ರಯೋಜನ ಪಡೆದು, ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದರು. ವೇದಿಕೆಯಲ್ಲಿ ಪ್ರಗತಿಬಂಧು ಸ್ವಸಹಾಯ ಸಂಘಗಳ ರಾಮಕುಂಜ ಒಕ್ಕೂಟದ ಅಧ್ಯಕ್ಷ ಪ್ರದೀಪ್ ಬಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಗೋಳಿತೊಟ್ಟು ವಲಯದ ಮೇಲ್ವಿಚಾರಕಿ ಜಯಶ್ರೀ, ಆಲಂಕಾರು ವಲಯದ ಮೇಲ್ವಿಚಾರಕಿ ಸುಜಾತ ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ನಂತರ ಕೇಶವನ ಚಾರಿಟೇಬಲ್ ಟ್ರಸ್ಟ್ ಪುತ್ತೂರು ಇದರ ಮ್ಯಾನೇಜಿಂಗ್ ಟ್ರಸ್ಟಿಯಾದ ಡಾ. ರವೀಂದ್ರನಾಥ್ ಐತಾಲ್ ಇವರಿಂದ ’ಸರ್ರೊದ ಆರೋಗ್ಯ ಬೊಕ್ಕ ಪುಲಮರ್ದ್’ ಹಾಗೂ ಧನ್ವಂತರಿ ಆಸ್ಪತ್ರೆ ಉಪ್ಪಿನಂಗಡಿ ಇದರ ಮ್ಯಾನೇಜಿಂಗ್ ಡೈರೆಕ್ಟರ್ ಡಾ. ನಿರಂಜನ್ ರೈ ಇವರಿಂದ ’ತಿನ್ಪಿ ಸೊತ್ತುಲೆ ಪ್ರಯೋಜನ’ ಈ ವಿಷಯದ ಕುರಿತು ಮಾಹಿತಿ ಕಾರ್ಯಾಗಾರ ನಡೆಯಿತು. ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಗಾಯತ್ರಿ ಯು.ಎನ್.ಸ್ವಾಗತಿಸಿ, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯನಿ ಲೋಹಿತಾ ಎ ವಂದಿಸಿದರು. ಸಹಶಿಕ್ಷಕಿ ಸರಿತಾ ಕಾರ್ಯಕ್ರಮ ನಿರ್ವಹಿಸಿದರು. ಸಂಸ್ಥೆಯ ವ್ಯವಸ್ಥಾಪಕ ರಮೇಶ್ ರೈ, ಶಿಕ್ಷಕ ಶಿಕ್ಷಕೇತರ ವೃಂದ, ನಿಲಯ ಪಾಲಕರು, ವಿದ್ಯಾರ್ಥಿಗಳು ಸಹಕರಿಸಿದರು.









