







ಪುತ್ತೂರು: ಒಳಮೊಗ್ರು ಗ್ರಾಮ ಪಂಚಾಯತ್ನಲ್ಲಿ ಎ.7ರಂದು ಭಾರತದ ಜನಗಣತಿ ಬಗ್ಗೆ ಮತ್ತು ಸ್ವಯಂ ಗಣತಿ ಮಾಹಿತಿ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು .ತಾಲೂಕು ಉಪತಹಶೀಲ್ದಾರರು ಮತ್ತು ಮಾಸ್ಟರ್ ಟ್ರೈನರ್ ಇವರು ಜನಗಣತಿ ಯ ಬಗ್ಗೆ ಮಾಹಿತಿಯನ್ನು ನೀಡಿದರು. ಸಭೆಯಲ್ಲಿ ಪಂಚಾಯತ್ ಆಡಳಿತಾಧಿಕಾರಿ ಧರ್ಮಪಾಲ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುರೇಶ್ ಕೆ,ಕಾರ್ಯದರ್ಶಿ ಜಯಂತಿ, ಗ್ರಾಮ ಪಂಚಾಯತ್ ಸಿಬ್ಬಂದಿಗಳು, ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ಗ್ರಂಥಾಲಯ ಸಿಬ್ಬಂದಿ,ಗ್ರಾಮ ಕಾರಣಿಕರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾಕಾರ್ಯಕರ್ತೆಯರು ಮತ್ತು ಅನುಗ್ರಹ ಸಂಜೀವಿನಿ ಒಕ್ಕೂಟದ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಸದಸ್ಯರು ಉಪಸ್ಥಿತರಿದ್ದರು.












