






ಪುತ್ತೂರು: ಒಳಮೊಗ್ರು ಗ್ರಾಮ ಪಂಚಾಯತ್ ವತಿಯಿಂದ ತಿಂಗಳ ಮೊದಲ ಶನಿವಾರ ಸ್ವಚ್ಛ ಶನಿವಾರ ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ ಶೇಖಮಲೆಯಿಂದ ಕುಂಬ್ರ ಜಂಕ್ಷನ್ ವರೆಗೆ ಹೆದ್ದಾರಿ ಬದಿ ಸ್ವಚ್ಛತೆ ಮಾಡುವ ಮೂಲಕ ಆಚರಿಸಲಾಯಿತು. ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುರೇಶ್ ಕೆ, ಕಾರ್ಯದರ್ಶಿ ಜಯಂತಿ, ಪಂಚಾಯತ್ ಸಿಬ್ಬಂದಿಗಳು, ಮಾಜಿ ಸದಸ್ಯ ಶೀನಪ್ಪ ನಾಯ್ಕ ಬೊಳ್ಳಾಡಿ, ಅಂಗನವಾಡಿ ಕಾರ್ಯಕರ್ತೆಯರು, ಅನುಗ್ರಹ ಸಂಜೀವಿನಿ ಒಕ್ಕೂಟದ ಎಂಬಿಕೆ ಚಂದ್ರಿಕಾ ರೈ ಮೊಡಪ್ಪಾಡಿ, ಪಂಚಾಯತ್ ಮಾಜಿ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು, ಸಂಜೀವಿನಿ ಒಕ್ಕೂಟದ ಎಲ್ಸಿಆರ್ಪಿ. ಸದಸ್ಯರು, ಸಾರ್ವಜನಿಕರು ಭಾಗವಹಿಸಿದ್ದರು.












