ಉಪ್ಪಳಿಗೆ ಸರ್ಕಾರಿ ಪ್ರೌಢಶಾಲೆ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ

0

ಪುತ್ತೂರು: ಇರ್ದೆ ಉಪ್ಪಳಿಗೆ ಸರಕಾರಿ ವತಿಯಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಮತ್ತು ಪೋಷಕರಿಗಾಗಿ ಎಸ್‌ಎಸ್‌ಎಲ್‌ಸಿ ನಂತರ ಮುಂದೇನು? ಎಂಬ ವಿಷಯದಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಾಗಾರವು ಎ.10ರಂದು ಶಾಲಾ ಉತ್ತುಂಗ ಸಭಾಭವನದಲ್ಲಿ ನಡೆಯಿತು.


ಕಾರ್ಯಾಗಾರವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಎಸ್‌ಡಿಎಂಸಿ ಕಾರ್ಯಾಧ್ಯಕ್ಷ ಕೃಷ್ಣಪ್ರಸಾದ ಆಳ್ವ ಮಾತನಾಡಿ, ವಿದ್ಯಾರ್ಥಿಗಲು ತಮಗೆ ದೊರೆತ ಸದಾವಕಾಶವನ್ನು ಬಳಸಿಕೊಂಡು ಭವಿಷ್ಯವನ್ನು ಸುಂದರವಾಗಿ ರೂಪಿಸಿಕೊಳ್ಳುವಂತೆ ತಿಳಿಸಿದರು. ಎಸ್‌ಡಿಎಂಸಿ ಸದಸ್ಯರಾದ ಜಗನಾಥ್ ರೈ, ಶುಭಕರ ನಾಯ್ಕ, ಪುತ್ತು ಚೆಲ್ಯಡ್ಕ ಉಪಸ್ಥಿತರಿದ್ದರು. ಶಿಕ್ಷಕಿ ಪ್ರಿಯಾ ಗೌಡ ಸ್ವಾಗತಿಸಿ ವಿದ್ಯಾರ್ಥಿ ವೀಕ್ಷಾ ವಂದಿಸಿದರು.


ನಂತರ ನಡೆದ ಕಾರ್ಯಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿದ್ದ ಬೆಂಗಳೂರಿನ ಐಎಟಿಎಫ್ ಆಡಿಟರ್ ಸುಂದರ್ ಡಿ., ವಿದ್ಯಾರ್ಥಿ ಪೋಷಕ ನಟರಾಜ್ ಕೆ, ಸುಳ್ಯ ಉಪ ವಿಭಾಗದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇದರ ಸಹಾಯಕ ಇಂಜಿನಿಯರ್ ಮಣಿಕಂಠನ್ ಅವರು, ೧೦ನೇ ತರಗತಿಯ ನಂತರ ಆಯ್ಕೆ ಮಾಡಿಕೊಳ್ಳಬಹುದಾದ ಕೋರ್ಸ್ ಮತ್ತು ವೃತ್ತಿಗಳ ವಿವರಿಸಿದರು ಸವಾಲುಗಳನ್ನು ಎದುರಿಸಲು ತಯಾರಿ ಹೇಗಿರಬೇಕು ಎಂದು ಸಲಹೆ ನೀಡಿದರು.

LEAVE A REPLY

Please enter your comment!
Please enter your name here