ಏ.16-17: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ವರ್ಷಾವಧಿ ಜಾತ್ರೋತ್ಸವ ಹಿನ್ನಲೆ : ವಾಹನ ಸಂಚಾರದಲ್ಲಿ ಬದಲಾವಣೆ ; ಇಲ್ಲಿದೆ ಮಾಹಿತಿ…

0

ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಹಿನ್ನೆಲೆಯಲ್ಲಿ, ನಗರದ ಸುಗಮ ಸಂಚಾರಕ್ಕಾಗಿ ಏಪ್ರಿಲ್ 16 ಮತ್ತು 17 ರಂದು ಸಂಚಾರ ಮಾರ್ಗ ಬದಲಾವಣೆ ಹಾಗೂ ಪಾರ್ಕಿಂಗ್ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ.

ಭಕ್ತಾದಿಗಳು ಮತ್ತು ಸಾರ್ವಜನಿಕರ ಗಮನಕ್ಕೆ ಪ್ರಮುಖ ಅಂಶಗಳು ಇಲ್ಲಿವೆ:

ಏ.16.04.2026: ಬಲ್ನಾಡು ದೈವಗಳ ಭಂಡಾರದ ಆಗಮನ
ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಗಳ ಭಂಡಾರವು ಬಪ್ಪಳಿಗೆಯಲ್ಲಿ ರಾಷ್ಟ್ರೀಯ ಹೆದ್ದಾರಿ ದಾಟುವ ಸಂದರ್ಭದಲ್ಲಿ, ಅಂದಾಜು ಒಂದು ಗಂಟೆಯ ಕಾಲ ಸಂಚಾರದಲ್ಲಿ ವ್ಯತ್ಯಯವಾಗಲಿದ್ದು, ಪೊಲೀಸರು ಪರ್ಯಾಯ ವ್ಯವಸ್ಥೆ ಮಾಡಲಿದ್ದಾರೆ.

ಏ.17.04.2026: ಬ್ರಹ್ಮರಥೋತ್ಸವ
ರಥೋತ್ಸವದ ಪ್ರಯುಕ್ತ ಸಂಜೆ 4:00 ಗಂಟೆಯಿಂದ ಪುತ್ತೂರು ನಗರದ ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ.

ಸಾರಿಗೆ ಮತ್ತು ವಾಹನ ಸಂಚಾರ ಬದಲಾವಣೆಗಳು:
ಕೆ.ಎಸ್.ಆರ್.ಟಿ.ಸಿ ಮತ್ತು ಖಾಸಗಿ ಬಸ್ಸುಗಳು: ನಗರದ ಒಳಗಿನ ಮುಖ್ಯ ರಸ್ತೆಗಳ ಬದಲಾಗಿ ನಿಗದಿಪಡಿಸಿದ ಪರ್ಯಾಯ ಮಾರ್ಗಗಳಲ್ಲಿ ಸಂಚರಿಸಬೇಕು.
ಆಟೋ ರಿಕ್ಷಾ ಸಂಚಾರ: ಜಾತ್ರಾ ಪ್ರದೇಶ ಮತ್ತು ರಥಬೀದಿಯ ಸುತ್ತಮುತ್ತ ಆಟೋ ಸಂಚಾರಕ್ಕೆ ನಿರ್ಬಂಧವಿದ್ದು, ತಾತ್ಕಾಲಿಕ ನಿಲುಗಡೆ ತಾಣಗಳನ್ನು ಬಳಸಲು ಸೂಚಿಸಲಾಗಿದೆ.

ಭಾರೀ ವಾಹನಗಳು:
ಹಬ್ಬದ ಸಂದರ್ಭದಲ್ಲಿ ನಗರದೊಳಗೆ ಭಾರೀ ವಾಹನಗಳ ಪ್ರವೇಶವನ್ನು ಸಂಪೂರ್ಣವಾಗಿ ನಿಯಂತ್ರಿಸಲಾಗುತ್ತದೆ.

ಪಾರ್ಕಿಂಗ್ ವ್ಯವಸ್ಥೆ:
ಭಕ್ತಾದಿಗಳ ವಾಹನಗಳ ನಿಲುಗಡೆಗಾಗಿ ನಗರದ ವಿವಿಧೆಡೆ (ಶಾಲಾ ಮೈದಾನಗಳು ಮತ್ತು ಮುಕ್ತ ಪ್ರದೇಶಗಳು) ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದ್ದು, ರಸ್ತೆ ಬದಿ ವಾಹನ ನಿಲ್ಲಿಸುವುದನ್ನು ನಿಷೇಧಿಸಲಾಗಿದೆ.

ಪೊಲೀಸ್ ಇಲಾಖೆ ಮತ್ತು ಉಪವಿಭಾಗಾಧಿಕಾರಿಗಳ ಈ ಆದೇಶವು ಜನದಟ್ಟಣೆಯನ್ನು ನಿಯಂತ್ರಿಸಿ ಸುರಕ್ಷತೆ ಕಾಪಾಡುವ ಉದ್ದೇಶ ಹೊಂದಿದೆ. ಸಾರ್ವಜನಿಕರು ಹಾಗೂ ವಾಹನ ಸವಾರರು ಈ ಬದಲಾವಣೆಗಳಿಗೆ ಸಹಕರಿಸಿ, ಸುಗಮ ಜಾತ್ರೋತ್ಸವಕ್ಕೆ ಕೈಜೋಡಿಸಬೇಕಾಗಿ ಪುತ್ತೂರು ಉಪವಿಭಾಗದ ಪೊಲೀಸ್ ಉಪ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಏ.16 ಮತ್ತು ಏ.17ರಂದು ಸಂಜೆ 4ಗಂಟೆಯ ನಂತರ ಸಾರಿಗೆ ಬಸ್ ಸಂಚರಿಸುವ ಮಾರ್ಗ ಬದಲಾವಣೆಯ ವಿವರ:

  • ಬಸ್ ನಿಲ್ದಾಣದಿಂದ ಹೊರಡುವ ಎಲ್ಲಾ ಸಾರಿಗೆ ಬಸ್ ಗಳು ಎಂ.ಟಿ ರಸ್ತೆಯ ಮೂಲಕ ತೆರಳಿ, ಮುಂದೆ ಎಡಕ್ಕೆ ತಿರುಗಿ, ಪರ್ಲಡ್ಕ ಬೈಪಾಸ್ ಮೂಲಕ ತೆರಳಬೇಕು.
  • ಕಬಕ- ಮಂಗಳೂರು ಕಡೆಯಿಂದ ಬರುವ ಎಲ್ಲಾ ಸಾರಿಗೆ ಬಸ್ ಗಳು ಲಿನೆಟ್ – ಬೊಳುವಾರು – ಪಡೀಲ್ – ಕೊಟೆಚಾ ಹಾಲ್ ಕ್ರಾಸ್ -ಸಾಲ್ಮರ – ಎಪಿಎಂಸಿ ಮೂಲಕ ಬಸ್ ನಿಲ್ದಾಣಕ್ಕೆ ಸಂಚರಿಸಬೇಕು.
  • ಉಪ್ಪಿನಂಗಡಿ ಕಡೆಯಿಂದ ಬರುವ ಎಲ್ಲಾ ಸಾರಿಗೆ ಬಸ್ ಗಳು – ಪಡೀಲ್ – ಕೊಟೆಚಾ ಹಾಲ್ ಕ್ರಾಸ್ ಸಾಲ್ಮರ -ಎಪಿಎಂಸಿ ಮೂಲಕ ಬಸ್ ನಿಲ್ದಾಣಕ್ಕೆ ಸಂಚರಿಸಬೇಕು.
  • ಸುಳ್ಯ- ಸಂಪ್ಯ – ಮಡಿಕೇರಿ ಕಡೆಯಿಂದ ಬರುವ ಎಲ್ಲಾ ಸಾರಿಗೆ ಬಸ್ಟ್ ಗಳು ಅಶ್ವಿನಿ ಜಂಕ್ಷನ್- ದರ್ಬೆ- ಅರುಣಾ ಥಿಯೇಟರ್ ಮೂಲಕ ಬಸ್ ನಿಲ್ದಾಣಕ್ಕೆ ಸಂಚರಿಸಬೇಕು.

ಆಟೋರಿಕ್ಷಾ ಸಂಚರಿಸುವ ಮಾರ್ಗದ ವಿವರ:

  • ನೆಹರೂನಗರ -ಬೊಳುವಾರು ಕಡೆಯಿಂದ ಬರುವ ಆಟೋರಿಕ್ಷಾಗಳು ಮಯೂರ ಇನ್ ಲ್ಯಾಂಡ್ ಬಳಿ ಪ್ರಯಾಣಿಕರನ್ನು ಇಳಿಸಿ, ಉರ್ಲಾಂಡಿ ಕ್ರಾಸ್ ಮೂಲಕ ವಾಪಸ್ಸು ಸಂಚರಿಸುವುದು.
  • ದರ್ಬೆ ಕಡೆಯಿಂದ ಬರುವ ಆಟೋರಿಕ್ಷಾಗಳು ಎಪಿಎಂಸಿ ರಸ್ತೆಯ ಮುಖಾಂತರ ನೆಲ್ಲಿಕಟ್ಟೆ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಮುಂಭಾಗದಿಂದ ಗಾಂಧಿಕಟ್ಟೆ ಕಡೆಗೆ ಬಂದು ಪ್ರಯಾಣಿಕರನ್ನು ಇಳಿಸಿ, ವಾಪಸ್ಸು ಮುಖ್ಯ ರಸ್ತೆಯಾಗಿ ದರ್ಬೆ ಕಡೆಗೆ ಸಂಚರಿಸುವುದು.
  • ಪರ್ಲಡ್ಕ – ಬಪ್ಪಳಿಗೆ ಕಡೆಯಿಂದ ಬರುವ ಆಟೋರಿಕ್ಷಾಗಳು ಕಿಲ್ಲೆ ಮೈದಾನದ ಬಳಿ ಪ್ರಯಾಣಿಕರನ್ನು ಇಳಿಸಿ, ವಾಪಾಸು ಸಂಚರಿಸುವುದು.

ಏ.16 ಮತ್ತು ಏ.17ರಂದು ಸಂಜೆ 4ಗಂಟೆಯ ನಂತರ ಸಾರಿಗೆ ಬಸ್ ಸಂಚರಿಸುವ ಮಾರ್ಗ ಬದಲಾವಣೆಯ ವಿವರ

  • ಕಬಕ- ಮಂಗಳೂರು ಕಡೆಯಿಂದ ಬರುವ ಎಲ್ಲಾ ಸಾರಿಗೆ ಬಸ್ ಗಳು ಲಿನೆಟ್ – ಬೊಳುವಾರು – ಪಡೀಲ್ – ಕೊಟೆಚಾ ಹಾಲ್ ಕ್ರಾಸ್ -ಸಾಲ್ಮರ – ಎಪಿಎಂಸಿ ಮೂಲಕ ಬಸ್ ನಿಲ್ದಾಣಕ್ಕೆ ಸಂಚರಿಸಬೇಕು.
  • ಉಪ್ಪಿನಂಗಡಿಕಡೆಯಿಂದ ಬರುವ ಎಲ್ಲಾ ಸಾರಿಗೆ ಬಸ್ ಗಳು – ಪಡೀಲ್ – ಕೊಟೆಚಾ ಹಾಲ್ ಕ್ರಾಸ್ ಸಾಲ್ಮರ -ಎಪಿಎಂಸಿ ಮೂಲಕ ಬಸ್ ನಿಲ್ದಾಣಕ್ಕೆ ಸಂಚರಿಸಬೇಕು.
  • ಸುಳ್ಯ- ಸಂಪ್ಯ – ಮಡಿಕೇರಿ ಕಡೆಯಿಂದ ಬರುವ ಎಲ್ಲಾ ಸಾರಿಗೆ ಬಸ್ಟ್ ಗಳು ಅಶ್ವಿನಿ ಜಂಕ್ಷನ್- ದರ್ಬೆ- ಅರುಣಾ ಥಿಯೇಟರ್ ಮೂಲಕ ಬಸ್ ನಿಲ್ದಾಣಕ್ಕೆ ಸಂಚರಿಸಬೇಕು.

ಆಟೋರಿಕ್ಷಾ ಸಂಚರಿಸುವ ಮಾರ್ಗದ ವಿವರ:

  • ನೆಹರೂನಗರ -ಬೊಳುವಾರು ಕಡೆಯಿಂದ ಬರುವ ಅಟೋರಿಕ್ಷಾಗಳು ಮಯೂರ ಇನ್ ಲ್ಯಾಂಡ್ ಬಳಿ ಪ್ರಯಾಣಿಕರನ್ನು ಇಳಿಸಿ, ಉರ್ಲಾಂಡಿ ಕ್ರಾಸ್ ಮೂಲಕ ವಾಪಸ್ಸು ಸಂಚರಿಸುವುದು.
  • ದರ್ಬೆ ಕಡೆಯಿಂದ ಬರುವ ಆಟೋರಿಕ್ಷಾಗಳು ಎಪಿಎಂಸಿ ರಸ್ತೆಯ ಮುಖಾಂತರ ನೆಲ್ಲಿಕಟ್ಟೆ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಮುಂಭಾಗದಿಂದ ಗಾಂಧಿಕಟ್ಟೆ ಕಡೆಗೆ ಬಂದು ಪ್ರಯಾಣಿಕರನ್ನು ಇಳಿಸಿ, ವಾಪಸ್ಸು ಮುಖ್ಯ ರಸ್ತೆಯಾಗಿ ದರ್ಬೆ ಕಡೆಗೆ ಸಂಚರಿಸುವುದು.
  • ಪರ್ಲಡ್ಕ – ಬಪ್ಪಳಿಗೆ ಕಡೆಯಿಂದ ಬರುವ ಆಟೋರಿಕ್ಷಾಗಳು ಕಿಲ್ಲೆ ಮೈದಾನದ ಬಳಿ ಪ್ರಯಾಣಿಕರನ್ನು ಇಳಿಸಿ, ವಾಪಾಸು ಸಂಚರಿಸುವುದು.

LEAVE A REPLY

Please enter your comment!
Please enter your name here