ಚಿಗುರೆಲೆ ಸಾಹಿತ್ಯ ವೇದಿಕೆ ಹಾಗೂ ಕನ್ನಡ ಸಾಹಿತ್ಯ ಪರಿಷತ್‌ ನಿಂದ ಪ್ರಗತಿ ಸ್ಟಡಿ ಸೆಂಟರ್‌ನ ಪಿಯುಸಿ ಸಾಧಕರಿಗೆ ಸನ್ಮಾನ

0


ಪುತ್ತೂರು : ಪುತ್ತೂರಿನ ಹೃದಯ ಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ ಎಪ್ರಿಲ್ 12ರಂದು ಪುತ್ತೂರು ಚಿಗುರೆಲೆ ಸಾಹಿತ್ಯ ಬಳಗದ ನೇತೃತ್ವದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕದ ಸಹಕಾರದೊಂದಿಗೆ ಪ್ರಗತಿ ಸ್ಟಡಿ ಸೆಂಟರ್ ಪುತ್ತೂರು ಆಶ್ರಯದಲ್ಲಿ ಚಿಗುರೆಲೆ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಿತು.

ಈ ಕಾರ್ಯಕ್ರಮದಲ್ಲಿ 2025-26ನೇ ಸಾಲಿನ ದ್ವೀತಿಯ ಪಿಯುಸಿಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಮುಹಮ್ಮದ್ ರಾಹಿಫ್(524),ಆಯಿಷತ್ತುಲ್ ಜಾಸ್ಮಿನ್(522),ಎಂ ಜಿ ಸಾನಿಧ್ಯ(515) ಇವರನ್ನು ಮಂಗಳೂರು ಕರಾವಳಿ ಲೇಖಕಿಯರ ಮತ್ತು ವಾಚಕಿಯರ ಸಂಘದ ಅಧ್ಯಕ್ಷೆ, ಮಾಜಿ ಶಾಸಕಿ ಶಕುಂತಲಾ.ಟಿ.ಶೆಟ್ಟಿ ಅವರು ಸನ್ಮಾನಿಸಿ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಪುತ್ತೂರು ಉಮೇಶ್‌ ನಾಯಕ್‌, ಮೂಡುಗೆರೆ ಕರ್ನಾಟಕ ಸಾಹಿತ್ಯ ಸಂಭ್ರಮ ವೇದಿಕೆಯ ರಾಜಾಧ್ಯಕ್ಷ ಎಂ ಎಸ್ ನಾಗರಾಜ, ನಿವೃತ್ತ ಉಪನ್ಯಾಸಕ ಮಹಾಲಿಂಗೆಶ್ವರ ಭಟ್ಟ .ಕೆ , ಮಧು ಪ್ರಪಂಚ ಪತ್ರಿಕೆಯ ಸಂಪಾದಕ ನಾರಾಯಣ ರೈ ಕುಕ್ಕುವಳ್ಳಿ , ಬಾಲಕೃಷ್ಣ ಕಾರಂತ ಎರುಂಬು , ಸುಲೋಚನಾ ಪಿ.ಕೆ , ಶಶಿಕಲಾ ವರ್ಕಾಡಿ , ಸಂಸ್ಥೆಯ ಸ್ಥಾಪಕಾಧ್ಯಕ್ಷ ಗೋಕುಲ್‌ನಾಥ ಪಿ.ವಿ ಹಾಗೂ ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here