ಹನುಮಗಿರಿ ಬ್ರಹ್ಮಕಲಶೋತ್ಸವಕ್ಕೆ ಆನೆಗುಂದಿ ಮಹಾಸಂಸ್ಥಾನದ ಶ್ರೀಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮೀಜಿ ಆಗಮನ

0

ಪುತ್ತೂರು: ಎ.9ರಿಂದ 12ರವರೆಗೆ ನಡೆದ ಹನುಮಗಿರಿ ಕೋದಂಡರಾಮ ಹಾಗೂ ಪಂಚಮುಖಿ ಆಂಜನೇಯ ದೇವರ ಬ್ರಹ್ಮಕಲಶೋತ್ಸವ ಕಾರ್ಯಕ್ರಮಕ್ಕೆ ಉಡುಪಿ ಕಾಪು ಪಡುಕುತ್ಯಾರು ಆನೆಗುಂದಿ ಮಹಾಸಂಸ್ಥಾನದ ಸರಸ್ವತಿ ಪೀಠದ ಜಗದ್ಗುರು ಅನಂತ ಶ್ರೀವಿಭೂಷಿತ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮೀಜಿಯವರು ಆಗಮಿಸಿದ್ದರು. ಎ.12ರಂದು ಭೇಟಿ ಮಾಡಿದ ಅವರನ್ನು ಕ್ಷೇತ್ರದ ವತಿಯಿಂದ ಸ್ವಾಗತಿಸಲಾಯಿತು. ಬಳಿಕ ಅವರು ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಈ ಸಂದರ್ಭದಲ್ಲಿ ಆಡಳಿತ ಧರ್ಮದರ್ಶಿ ನನ್ಯ ಅಚ್ಯುತ ಮೂಡೆತ್ತಾಯ ಹಾಗೂ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ವಿವಿಧ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here