ತಿಂಗಳಾಡಿ: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ, ಬಿಸು ಹಬ್ಬದ ಸಂಭ್ರಮ

0

ಪುತ್ತೂರು: ಕರ್ನಾಟಕ ರಾಜ್ಯ ಆದಿ ದ್ರಾವಿಡ ಸಮಾಜ ಸೇವಾ ಸಂಘ ಕೆದಂಬಾಡಿ ಗ್ರಾಮ ಸಮಿತಿಯ ವತಿಯಿಂದ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ ಹಾಗೂ ಬಿಸು ಹಬ್ಬದ ಆಚರಣೆಯು ಏ. 14ರಂದು ತಿಂಗಳಾಡಿ ಶ್ರೀ ಮಾರಿಯಮ್ಮ ದೇವಸ್ಥಾನದ ವಠಾರದಲ್ಲಿ ಅತ್ಯಂತ ವೈಭವದಿಂದ ಜರುಗಿತು.

ಮೋಹನ್ ರೈ ಓಲೆಮುಂಡೋವು ಅವರ ನೇತೃತ್ವದಲ್ಲಿ ನಡೆದ ಈ ಸಮಾರಂಭವನ್ನು ಅಲೇರಿ ಶ್ರೀ ಸತ್ಯ ಸಾರಮಾಣಿ ಆದಿ ಕ್ಷೇತ್ರದ ಗೌರವಾಧ್ಯಕ್ಷರಾದ ಪರಮೇಶ್ವರ ಸಾಲಿಯಾನ್ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ಸಭೆಯ ಅಧ್ಯಕ್ಷತೆಯನ್ನು ಕೆದಂಬಾಡಿ ಗ್ರಾಮ ಸಮಿತಿಯ ಅಧ್ಯಕ್ಷರಾದ ರಮೇಶ್ ಕುಮಾರ್ ವಹಿಸಿದ್ದರು. ಕರ್ನಾಟಕ ರಾಜ್ಯ ಆದಿ ದ್ರಾವಿಡ ಸಮಾಜ ಸೇವಾ ಸಂಘ ಪುತ್ತೂರು ಇದರ ಕೋಶಾಧಿಕಾರಿ ರಾಜಾ ಚೇಂಡಿಮಾರ್ ಅವರು ಸಂವಿಧಾನ ಹಾಗೂ ಬಾಬಾಸಾಹೇಬ್ ಅಂಬೇಡ್ಕರ್ ಅವರ ಕುರಿತು ಉಪನ್ಯಾಸ ನೀಡಿದರು.

ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಆದಿ ದ್ರಾವಿಡ ಸಮಾಜ ಸೇವಾ ಸಂಘದ ಅಧ್ಯಕ್ಷ ಬಾಬು ಮರಿಕೆ, ಕಾರ್ಯದರ್ಶಿ ಕೆ.ಕೆ ಮಾಸ್ಟರ್, ಪುತ್ತೂರು ಘಟಕದ ಮಾಜಿ ಜಿಲ್ಲಾಧ್ಯಕ್ಷ ಮೋಹನ್ ನೆಲ್ಲಿಗುಂಡಿ, ಮುಂಡೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಮಹಮ್ಮದ್ ಅಲಿ, ಗಾಂಧಿನಗರ ಶ್ರೀ ಮಾರಿಯಮ್ಮ ಸೇವಾ ಸಮಿತಿಯ ಗೌರವಾಧ್ಯಕ್ಷ ಅಣ್ಣು ಟಿ. ಮೊದಲಾದವರು ಭಾಗವಹಿಸಿದ್ದರು. ಕಾರ್ಯಕ್ರಮದ ಅಂಗವಾಗಿ ಸಾರ್ವಜನಿಕರಿಗೆ ಹಾಗೂ ಮಕ್ಕಳಿಗೆ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಮಹಿಳೆಯರು ಮತ್ತು ಪುರುಷರು ಅತ್ಯಂತ ಉತ್ಸಾಹದಿಂದ ಭಾಗವಹಿಸಿದರು. ಮೋಹನ್ ರೈ ಓಲೆಮುಂಡೋವು ಅವರು ಕಾರ್ಯಕ್ರಮಕ್ಕೆ ಆಗಮಿಸಿದವರಿಗೆ ಪಾನೀಯ, ಉಪಹಾರ ಹಾಗೂ ಮಧ್ಯಾಹ್ನದ ಭೋಜನದ ವ್ಯವಸ್ಥೆ ಮಾಡಿದ್ದರು. ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಕರ್ನಾಟಕ ರಾಜ್ಯ ಆದಿ ದ್ರಾವಿಡ ಸಮಾಜ ಸೇವಾ ಸಂಘದ ರಾಜ್ಯಾಧ್ಯಕ್ಷ ಗಣೇಶ್ ಪ್ರಸಾದ್ ಮೂಡಬಿದಿರೆ, ಜಿಲ್ಲಾಧ್ಯಕ್ಷ ಶ್ರೀನಿವಾಸ್ ಅರ್ಬಿಗುಡ್ಡೆ, ಯುವ ವೇದಿಕೆಯ ಅಧ್ಯಕ್ಷ ಮಹೇಶ್ ಮರಿಕೆ, ತಿಂಗಳಾಡಿಯ ಮಾಜಿ ಅಧ್ಯಕ್ಷ ಪ್ರವೀಣ್ ಶೆಟ್ಟಿ, ಕೆದಂಬಾಡಿ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಮೆಲ್ವಿನ್ ಮೋಂತೇರೋ ಹಾಗೂ ಶ್ರೀ ಮಾರಿಯಮ್ಮ ಸೇವಾ ಸಮಿತಿಯ ಅಧ್ಯಕ್ಷ ಸುಂದರ ಸಿ. ಅತಿಥಿಗಳಾಗಿ ಆಗಮಿಸಿ ವಿಜೇತರಿಗೆ ಬಹುಮಾನ ವಿತರಿಸಿದರು.

LEAVE A REPLY

Please enter your comment!
Please enter your name here