ಮಾಣಿಲ ಗ್ರಾಮ ಪಂಚಾಯತ್‌ನಲ್ಲಿ ಲಸಿಕಾ ಜಾಗೃತಿ ಕಾರ್ಯಕ್ರಮ

0


ಮಾಣಿಲ: ಜಿಲ್ಲಾಡಳಿತದ ಸಹಯೋಗದೊಂದಿಗೆ ಗ್ರಾಮ ಅಭಿವೃದ್ಧಿ ಯೋಜನೆ ಎಂಬ ಕೇಂದ್ರ ಸರ್ಕಾರದ ಉನ್ನತ ಭಾರತ ಅಭಿಯಾನದ ಭಾಗವಾಗಿ ಮಾಣಿಲ ಗ್ರಾಮ ಪಂಚಾಯತ್, ನಿಟ್ಟೆ ವಿಶ್ವವಿದ್ಯಾನಿಲಯದ ಡಿಪಾರ್ಟ್‌ಮೆಂಟ್ ಆಫ್ ಪಬ್ಲಿಕ್ ಹೆಲ್ತ್, ನಿಟ್ಟೆ ಇನ್ಸ್ಟಿಟ್ಯೂಟ್ ಆಫ್ ಅಲ್ಲೈಡ್ ಹೆಲ್ತ್ ಸೈನ್ಸಸ್ ಸಹಯೋಗದಲ್ಲಿ ಮಾಣಿಲ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಗುರುವಾರ ‘ಇಮ್ಯೂನೈಸೇಶನ್ ವೀಕ್’ ಅನ್ನು ಆಚರಿಸಲಾಯಿತು.


ನಿಟ್ಟೆ ವಿವಿಯ ಡಿಪಾರ್ಟ್‌ಮೆಂಟ್ ಆಫ್ ಪಬ್ಲಿಕ್ ಹೆಲ್ತ್‌ನ ಡಾ.ಮ್ಯಾಕ್ವಿನ್, ಡಾ.ಶ್ರೀಶರತ್ ಕೆ., ಪ್ರಜ್ವಲ್ ಜ್ಯುಪಿಟರ್ ಲೋಬೋ ಅವರ ಮಾರ್ಗದರ್ಶನದಲ್ಲಿ ವೈದ್ಯಕೀಯ ವಿದ್ಯಾರ್ಥಿಗಳು ಲಸಿಕೆಗಳ ಬಗೆಗೆ ಜಾಗೃತಿ ಮೂಡಿಸುವ ಕಿರು ನಾಟಕವನ್ನು ಪ್ರದರ್ಶಿಸಿದರು. ರಸಪ್ರಶ್ನೆಯನ್ನು ನಡೆಸಿಕೊಟ್ಟರು. ಮಕ್ಕಳಿಗೆ ಲಸಿಕೆ ನೀಡಬೇಕಾದ ವೇಳಾಪಟ್ಟಿಯನ್ನು ತಿಳಿಸಿಕೊಟ್ಟರು.


ನಿಟ್ಟೆ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸಸ್‌ನ ಸುಮಲತಾ ಉಪಸ್ಥಿತರಿದ್ದರು. ಮಾಣಿಲ ಗ್ರಾಮ ಪಂಚಾಯತ್‌ನ ಅಭಿವೃದ್ಧಿ ಅಧಿಕಾರಿ ಕೃಷ್ಣ ಕುಮಾರ್ ಕಮ್ಮಜೆ ಸ್ವಾಗತಿಸಿದರು. ಡಾ.ಶರಣ್ಯಾ ವಂದಿಸಿದರು. ವೈದ್ಯಕೀಯ ವಿದ್ಯಾರ್ಥಿನಿ ಅನೂಷಾ ಕಾರ್ಯಕ್ರಮ ನಿರ್ವಹಿಸಿದರು.

LEAVE A REPLY

Please enter your comment!
Please enter your name here