ಪಾಣಾಜೆ ಸುಬೋಧ  ಪ್ರೌಢಶಾಲೆಗೆ ಎಸ್ ಎಸ್ ಎಲ್.ಸಿ ಪರೀಕ್ಷೆಯಲ್ಲಿ ಸತತ ನಾಲ್ಕನೇ ಬಾರಿಗೆ ಶೇ.100 ಫಲಿತಾಂಶ- ದೀಪಕ್ ಪಿ.ಎಸ್ ಶಾಲೆಗೆ ಪ್ರಥಮ

0

ನಿಡ್ಪಳ್ಳಿ; ಪಾಣಾಜೆ ಸುಬೋಧ ಪ್ರೌಢಶಾಲೆಗೆ 2025-2026 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಸತತ ನಾಲ್ಕನೇ ಬಾರಿಗೆ ಶೇ.100 ಫಲಿತಾಂಶ ಬಂದಿರುತ್ತದೆ.ವಿದ್ಯಾರ್ಥಿ  ದೀಪಕ್ ಪಿ.ಎಸ್ 611 ಅಂಕ ಪಡೆದು ತರಗತಿಗೆ ಪ್ರಥಮ ಸ್ಥಾನ ಪಡೆದಿರುತ್ತಾನೆ ಎಂದು ಶಾಲಾ ಸಂಚಾಲಕ ಮಹಾಬಲೇಶ್ವರ ಭಟ್ ಗಿಳಿಯಾಲು ತಿಳಿಸಿರುತ್ತಾರೆ.

    ಪರೀಕ್ಷೆಗೆ ಹಾಜರಾದ ಒಟ್ಟು 32 ವಿದ್ಯಾರ್ಥಿಗಳಲ್ಲಿ 8 ಮಂದಿ ಡಿಸ್ಟಿಂಕ್ಷನ್ ಪಡೆದು 5 ಮಂದಿ 90% ಕ್ಕಿಂತ ಜಾಸ್ತಿ ಅಂಕ ಪಡೆದಿರುತ್ತಾರೆ.ಪ್ರಥಮ ದರ್ಜೆಯಲ್ಲಿ 15 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.

LEAVE A REPLY

Please enter your comment!
Please enter your name here