






ಪುತ್ತೂರು : 2025-26 ರ ಪ.ಪೂ ಪರೀಕ್ಷೆ -1 ರಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಬೆಟ್ಟಂಪಾಡಿಯ ಇಲ್ಲಿಯ ಹಾಜರಾದ 81 ವಿದ್ಯಾರ್ಥಿಗಳಲ್ಲಿ 77 ವಿದ್ಯಾರ್ಥಿಗಳು ತೇರ್ಗಡೆ ಹೊಂದಿ ಕಾಲೇಜಿಗೆ ಶೇಕಡ 95.10 ಫಲಿತಾಂಶ ಬಂದಿರುತ್ತದೆ.


ಇಲ್ಲಿನ ವಾಣಿಜ್ಯ ಸಂಯೋಜನೆಯಲ್ಲಿ ಹಾಜರಾದ 45 ವಿದ್ಯಾರ್ಥಿಗಳಲ್ಲಿ 45 ವಿದ್ಯಾರ್ಥಿಗಳು ತೇರ್ಗಡೆ ಹೊಂದಿ ಶೇಕಡ 100 ಫಲಿತಾಂಶ ದಾಖಲಾಗಿರುತ್ತದೆ.ಕಲಾ ಮತ್ತು ವಿಜ್ಞಾನ ವಿಭಾಗಗಳಲ್ಲಿ ಶೇಕಡ 88.88 ಫಲಿತಾಂಶ ಬಂದಿರುತ್ತದೆ. ವಾಣಿಜ್ಯ ವಿಭಾಗದ ಸಮೀಕ್ಷಾ ಜಿ. 573 ಅಂಕಗಳನ್ನು ಗಳಿಸುವುದರೊಂದಿಗೆ ಕಾಲೇಜಿನಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾಳೆ. ಒಟ್ಟಿನಲ್ಲಿ 19 ವಿದ್ಯಾರ್ಥಿಗಳು ವಿಶಿಷ್ಟಶ್ರೇಣಿಯಲ್ಲಿ,40 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ,14 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಹಾಗೂ 4 ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ.













