






ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಗಣಕ ವಿಜ್ಞಾನ ವಿಭಾಗದ ಆಶ್ರಯದಲ್ಲಿ ಏಪ್ರಿಲ್ 6ರಿಂದ 30ರ ವರೆಗೆ ಪುತ್ತೂರಿನ ಆಸುಪಾಸಿನಲ್ಲಿ ಕಲಿಯುತ್ತಿರುವ ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಗೆ 20 ದಿನಗಳ 60 ಗಂಟೆಗಳ ಕಂಪ್ಯೂಟರ್ ಸಾಕ್ಷರತಾ ಕಾರ್ಯಗಾರವನ್ನು ಆಯೋಜಿಸಲಾಯಿತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ವಂ.ಫಾ. ಅಶೋಕ್ ರಾಯನ್ ಕ್ರಾಸ್ತಾ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಬಿಡುವಿನ ಸಮಯವನ್ನು ವ್ಯರ್ಥ ಮಾಡದೇ ಇಂತಹ ತರಬೇತಿಗಳಲ್ಲಿ ಪಾಲ್ಗೊಂಡು ಉತ್ತಮ ಕೌಶಲ್ಯಗಳನ್ನು ಬೆಳೆಸಿಕೊಳ್ಳುವುದು ಸಹಕಾರಿಯಾಗಲಿದೆ.




ಮುಂದಿನ ದಿನಗಳಲ್ಲಿ ಪುತ್ತೂರಿನ ಆಸುಪಾಸಿನ ಎಲ್ಲಾ ವಿದ್ಯಾರ್ಥಿಗಳಿಗೆ ಇಂತಹ ತರಬೇತಿಗಳನ್ನು ಬೃಹತ್ ಆಗಿ ನಡೆಸುವುದು ನಮ್ಮ ಯೋಜನೆಯಾಗಿದೆ ಎಂದರು.
ಪುತ್ತೂರು ಮತ್ತು ಆಸುಪಾಸಿನ ಶಾಲಾ ಕಾಲೇಜುಗಳ ಒಟ್ಟು 27 ವಿದ್ಯಾರ್ಥಿಗಳು ಈ ಕಾರ್ಯಕ್ರಮದ ಪ್ರಯೋಜನವನ್ನು ಪಡೆದುಕೊಂಡರು. ಗಣಕ ವಿಭಾಗದ ಮುಖ್ಯಸ್ಥರಾದ ಗೋವಿಂದ ಪ್ರಕಾಶ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪನ್ಯಾಸಕ ಚಂದ್ರಾಕ್ಷ ನಿರೂಪಿಸಿದರು.










