






ನೆಲ್ಯಾಡಿ: ಜೇಸಿಐ ನೆಲ್ಯಾಡಿ ಇದರ ವತಿಯಿಂದ ಕಾರ್ಮಿಕ ದಿನಾಚರಣೆಯ ಅಂಗವಾಗಿ ಕಟ್ಟಡ ಕಾರ್ಮಿಕ ಪುರುಷೋತ್ತಮ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.


ಪುರುಷೋತ್ತಮ ಶೆಟ್ಟಿ ಅವರು ಕಳೆದ ೨೯ ವರ್ಷಗಳಿಂದ ಕಟ್ಟಡ ಕಾರ್ಮಿಕರಾಗಿ ದುಡಿಯುತ್ತಿದ್ದು ಮನೆ ನಿರ್ಮಾಣ, ದೈವ-ದೇವರ ಗುಡಿ ಗೋಪುರ, ಭಜನಾ ಮಂದಿರ ಹಾಗೂ ಸಿಮೆಂಟ್ ಡಿಸೈನ್ ಕೆಲಸಗಳನ್ನು ಮಾಡುತ್ತಿದ್ದಾರೆ. ಇವರ ಸೇವೆ ಪರಿಗಣಿಸಿ ಕಾರ್ಮಿಕ ದಿನಾಚರಣೆಯಂದು ಪುರುಷೋತ್ತಮ ಶೆಟ್ಟಿಯವರನ್ನು ಸನ್ಮಾನಿಸಿ ಗೌರವಿಸಲಾಯಿತು.



ರೇಷ್ಮಾ ಸನ್ಮಾನಿತರನ್ನು ಪರಿಚಯಿಸಿದರು. ಜೆಸಿಐ ನೆಲ್ಯಾಡಿ ಘಟಕದ ಅಧ್ಯಕ್ಷೆ ಪ್ರವೀಣಿ ಸುಧಾಕರ್ ಶೆಟ್ಟಿ, ನೆಲ್ಯಾಡಿ ಸಂತ ಜಾರ್ಜ್ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಅಬ್ರಹಾಂ ವರ್ಗೀಸ್, ಜೇಸಿಐ ವಲಯ 15ರ ವಲಯ ಯೋಜನಾಧಿಕಾರಿ ಪ್ರದೀಪ್ ಕುಮಾರ್ ರೈ, ಜೆಸಿಐ ನೆಲ್ಯಾಡಿ ಘಟಕದ ನಿಕಟ ಪೂರ್ವಾಧ್ಯಕ್ಷ ಡಾ.ಸುಧಾಕರ್ ಶೆಟ್ಟಿ, ಮಹಿಳಾ ಜೆಸಿ ಅಧ್ಯಕ್ಷೆ ನವ್ಯ ಪ್ರಸಾದ್, ಕಾರ್ಯದರ್ಶಿ ಶ್ರೇಯಸ್ ಶೆಟ್ಟಿ, ಕಾರ್ಯಕ್ರಮದ ಯೋಜನಾ ನಿರ್ದೇಶಕರಾದ ಪ್ರಶಾಂತ್. ಹರೀಶ್ ರೈ ಮತ್ತಿತರರು ಉಪಸ್ಥಿತರಿದ್ದರು.










