ಅಡ್ಡಹೊಳೆ: ನೇಣು ಬಿಗಿದು ಆಟೋ ಚಾಲಕ ಆತ್ಮಹತ್ಯೆ

0

ನೆಲ್ಯಾಡಿ: ಶಿರಾಡಿ ಗ್ರಾಮದ ಅಡ್ಡಹೊಳೆಯ ಅನಿತೋಟ ನಿವಾಸಿ, ಆಟೋ ಚಾಲಕ ಹರಿದಾಸ (63) ಅವರು ಮನೆಯ ಸಮೀಪದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ದುರ್ಘಟನೆ ಮೇ.4ರಂದು ಬೆಳಿಗ್ಗೆ ಬೆಳಕಿಗೆ ಬಂದಿದೆ.

ಹರಿದಾಸ ಅವರು ಮೇ.3ರ ರಾತ್ರಿ ಎಂದಿನಂತೆ ಊಟ ಮಾಡಿ ಮನೆಯಲ್ಲಿ ಮಲಗಿದ್ದರು. ಆದರೆ ಸೋಮವಾರ ಬೆಳಿಗ್ಗೆ ಮನೆಯವರು ಎದ್ದು ನೋಡಿದಾಗ ಅವರು ಮನೆಯಲ್ಲಿ ಕಾಣಿಸದೇ ಇದ್ದರು. ಇದರಿಂದ ಆತಂಕಗೊಂಡ ಕುಟುಂಬಸ್ಥರು ಸುತ್ತಮುತ್ತ ಹುಡುಕಾಟ ನಡೆಸಿದ ವೇಳೆ, ಮನೆಯಿಂದ ಸುಮಾರು 20 ಮೀಟರ್ ದೂರದಲ್ಲಿರುವ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಅವರು ಪತ್ತೆಯಾಗಿದ್ದಾರೆ.

ಹರಿದಾಸ ಅವರು ಕಳೆದ ಸುಮಾರು ಹತ್ತು ವರ್ಷಗಳಿಂದ ಗುಂಡ್ಯ–ಅಡ್ಡಹೊಳೆ ಭಾಗಗಳಲ್ಲಿ ಆಟೋ ಬಾಡಿಗೆ ನಡೆಸುತ್ತಿದ್ದರು.ಮೃತರು ಪತ್ನಿ ಮತ್ತು ಸೊಸೆಯೊಂದಿಗೆ ಮನೆಯಲ್ಲಿ ವಾಸವಾಗಿದ್ದು, ಅವರ ಇಬ್ಬರು ಗಂಡು ಮಕ್ಕಳು ವಿದೇಶದಲ್ಲಿ ಉದ್ಯೋಗದಲ್ಲಿದ್ದಾರೆ.

LEAVE A REPLY

Please enter your comment!
Please enter your name here