ಸುಳ್ಯ ವಿಧಾನಸಭಾ ಕ್ಷೇತ್ರದ ಅಕ್ರಮ ಸಕ್ರಮ ಸಮಿತಿ ಸದಸ್ಯ ಆದಂ ಕಾಜರೊಕ್ಕು ನಿಧನ

0

ರಾಮಕುಂಜ : ಇಲ್ಲಿನ ಕಾಜರೊಕ್ಕು ನಿವಾಸಿ, ಸುಳ್ಯ ವಿಧಾನಸಭಾ ಕ್ಷೇತ್ರದ ಅಕ್ರಮ ಸಕ್ರಮ ಸಮಿತಿ ಸದಸ್ಯ ಆದಂ (65ವ.) ಅವರು ಅಲ್ಪ ಕಾಲದ ಅಸೌಖ್ಯದಿಂದ ಮೇ 5 ರಂದು ಮುಂಜಾನೆ ಸ್ವಗ್ರಾಮದಲ್ಲಿ ನಿಧನರಾದರು.

ಆದಂ ಅವರು ಆತೂರು ಬದ್ರಿಯಾ ಜುಮಾ ಮಸೀದಿ ಮಾಜಿ ಅಧ್ಯಕ್ಷರೂ ಆಗಿದ್ದಾರೆ. ಅಲ್ಲದೆ ವಿವಿಧ ಸಂಘಟನೆಗಳಲ್ಲೂ ಗುರುತಿಸಿಕೊಂಡಿದ್ದರು. ಕೆಪಿಸಿಸಿ ಸದಸ್ಯ ಜಿ.ಕೃಷ್ಣಪ್ಪ ಸಹಿತ ಹಲವು ಕಾಂಗ್ರೆಸ್ ಮುಖಂಡರು ಮ್ರತರ ಮನೆಗೆ ಭೇಟಿ ನೀಡಿ ಸಂತಾಪ ಸೂಚಿಸಿದ್ದಾರೆ.

LEAVE A REPLY

Please enter your comment!
Please enter your name here