ಹಜ್ ಯಾತ್ರೆಗೆ ತೆರಳುವ ಶಾಹುಲ್ ಹಮೀದ್ ಕುತ್ತಾಮೊಟ್ಟೆಯವರಿಗೆ ಎಂಜೆಎಂ ವತಿಯಿಂದ ಬೀಳ್ಕೊಡುಗೆ

0

ಸುಳ್ಯ: ಗಾಂಧಿನಗರ ಜುಮ್ಮಾ ಮಸೀದಿ ಆಡಳಿತ ಸಮಿತಿ ನಿರ್ದೇಶಕರು ಹಾಗೂ ಸುಳ್ಯ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಾಮೊಟ್ಟೆ ಅವರು ಕುಟುಂಬ ಸಮೇತರಾಗಿ ಈ ವರ್ಷದ ಪವಿತ್ರ ಹಜ್ ಯಾತ್ರೆಗೆ ತೆರಳುವ ಪ್ರಯುಕ್ತ ಸುಳ್ಯ ಗಾಂಧಿನಗರ ತರ್ಬಿಯತುಲ್ ಇಸ್ಲಾಂ ಜಮಾ ಅತ್ ಕಮಿಟಿ (ಎಂಜೆಎಂ) ವತಿಯಿಂದ ಬೀಳ್ಕೊಡುಗೆ ನೀಡಲಾಯಿತು.

ಎಂಜೆಎಂ ಅಧ್ಯಕ್ಷ ಹಾಜಿ ಕೆ.ಎಂ.ಎಸ್. ಮಹಮ್ಮದ್ ಅಧ್ಯಕ್ಷತೆ ವಹಿಸಿದ್ದರು. ಖತೀಬರಾದ ಅಲ್ ಹಾಜ್ ಅಶ್ರಫ್ ಖಾಮಿಲ್ ಸಖಾಫಿ ಅವರು ದುವಾ ನೆರವೇರಿಸಿದರು.ಕಾರ್ಯಕ್ರಮದಲ್ಲಿ ಸುಳ್ಯ ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಹಾಗೂ ಎಂಜೆಎಂ ಮಾಜಿ ಅಧ್ಯಕ್ಷ ಕೆ.ಎಂ. ಮುಸ್ತಫ, ಉಪಾಧ್ಯಕ್ಷ ಅಬ್ದುಲ್ ಹಮೀದ್ ಬೀಜಕೊಚ್ಚಿ, ಖಜಾಂಚಿ ಹಾಜಿ ಎಸ್.ಎಂ. ಅಬ್ದುಲ್ ಹಮೀದ್, ಕಾರ್ಯದರ್ಶಿ ಹಾಜಿ ಐ. ಇಸ್ಮಾಯಿಲ್, ನಿರ್ದೇಶಕರಾದ ಕೆ.ಎಸ್. ಉಮ್ಮರ್, ಹಾಜಿ ಮುಹಿಯ್ಯದ್ದೀನ್ ಫ್ಯಾನ್ಸಿ, ಹಾಜಿ ಅಬ್ದುಲ್ ಗಫಾರ್, ಮುಅಝಿನ್ ಉಸ್ತಾದ್ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here