







ಪುತ್ತೂರು: ಪುತ್ತೂರು ಸಹಾಯಕ ಕಮಿಷನರ್ ಕಚೇರಿಯಲ್ಲಿ ಚಾಲಕರಾಗಿ ಸೇವೆ ಸಲ್ಲಿಸಿ ನಿವೃತ್ತಿಗೊಂಡಿದ್ದ ಪರ್ಲಡ್ಕ ನಿವಾಸಿ ಶ್ರೀಧರ್ ಮಣಿಯಾನಿ(73.ವ) ಅವರು ಹೃದಯಾಘಾದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಮೇ.10ರಂದು ರಾತ್ರಿ ನಿಧನರಾಗಿದ್ದಾರೆ. ಕಳೆದ ಶನಿವಾರ ಬೈಪಾಸ್ ಸರ್ಜರಿಗೆ ಒಳಗಾಗಿದ್ದ ಅವರು ಕಡಿಮೆ ರಕ್ತದೊತ್ತಡದಿಂದ ಕಳೆದ ರಾತ್ರಿ ನಿಧನರಾಗಿದ್ದಾರೆ.ಮೃತರು ಪತ್ನಿ, ಎರಡು ಗಂಡು, ಒಂದು ಹೆಣ್ಣು ಮಕ್ಕಳು, ಸೊಸೆಯಂದಿರು, ಅಳಿಯ, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.












