






ಪುತ್ತೂರು: ಶ್ರೀ ಕೋದಂಡರಾಮ ಪಂಚಮುಖಿ ಆಂಜನೇಯ ಕ್ಷೇತ್ರ ಹನುಮಗಿರಿಗೆ ಮೇ 13ರಂದು ಶೃಂಗೇರಿ ಶ್ರೀ ಶಾರದಾ ಪೀಠಾಧೀಶರಾದ ಜಗದ್ಗುರು ಶಂಕರಾಚಾರ್ಯ ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮಿಗಳು ಆಗಮಿಸಲಿದ್ದಾರೆ.


ಮೇ 13ರಂದು ಸಂಜೆ 4.30ಕ್ಕೆ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರು ಕ್ಷೇತ್ರಕ್ಕೆ ಆಗಮಿಸಲಿದ್ದು, ಸಂಜೆ 5 ಗಂಟೆಯಿಂದ ಭಕ್ತರಿಗೆ ಧರ್ಮ ಸಂದೇಶ ನೀಡಲಿದ್ದಾರೆ ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ.













