






ಪುತ್ತೂರು: ಬಂಟರ ಯಾನೆ ನಾಡವರ ಮಾತೃ ಸಂಘದ ಉಪಾಧ್ಯಕ್ಷ ಸ್ಥಾನಕ್ಕೆ ಕಾವು ಹೇಮನಾಥ ಶೆಟ್ಟಿ ಅವರು ಅವಿರೋಧವಾಗಿ ಪುನರಾಯ್ಕೆಯಾಗಿದ್ದಾರೆ.ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಲ್ಲ ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಲ್ಲ ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.


ಕಾಸರಗೋಡು ತಾಲೂಕಿನಲ್ಲಿ ನಾಮಪತ್ರ ಹಿಂಪಡೆಯುವ ಅವಧಿ ಮುಗಿದ ಬಳಿಕವೂ ಎರಡು ನಾಮಪತ್ರ ಹೆಚ್ಚು ಇದ್ದುದರಿಂದ ಅನಿವಾರ್ಯವಾಗಿ ಚುನಾವಣೆ ನಡೆದಿತ್ತು.ಅಧ್ಯಕ್ಷರು ಸೇರಿ 84 ಸದಸ್ಯರ ಕಾರ್ಯಕಾರಿ ಸಮಿತಿಯನ್ನು ಚುನಾವಣಾ ಆಯೋಗ ಅಧಿಕೃತವಾಗಿ ಘೋಷಿಸಿದೆ. ಅಧ್ಯಕ್ಷರಾಗಿ ಅಜಿತ್ ಕುಮಾರ್ ರೈ ಮಾಲಾಡಿ ಆಯ್ಕೆಯಾಗಿದ್ದಾರೆ. ಕಾರ್ಯಕಾರಿ ಸಮಿತಿ ಚುನಾವಣೆ ಪ್ರಕ್ರಿಯೆ ಮುಗಿದ ಬಳಿಕ ಏಕೈಕ ಉಪಾಧ್ಯಕ್ಷ ಸ್ಥಾನಕ್ಕೆ ಕಾವು ಹೇಮನಾಥ ಶೆಟ್ಟಿ ನಾಮಪತ್ರ ಸಲ್ಲಿಸಿ ಅವಿರೋಧವಾಗಿ ಆಯ್ಕೆಯಾದರು.



ದಶಕಗಳ ಸೇವೆ:
ಕಾವು ಹೇಮನಾಥ ಶೆಟ್ಟಿ ಅವರು ಮಾತೃ ಸಂಘದ ಜೊತೆ ಕಾರ್ಯದರ್ಶಿಯಾಗಿ, ಉಪಾಧ್ಯಕ್ಷರಾಗಿ ಹಾಗೂ ಪುತ್ತೂರು ಶ್ರೀ ರಾಮಕೃಷ್ಣ ಪ್ರೌಢಶಾಲೆಯ ಸಂಚಾಲಕರಾಗಿ ದಶಕಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ.ಪ್ರಸ್ತುತ ಪುತ್ತೂರು ತಾಲೂಕು ಬಂಟರ ಸಂಘದ ಅಧ್ಯಕ್ಷರಾಗಿರುವ ಅವರು, ಸಂಘಕ್ಕೆ ಸುಮಾರು 3.5 ಎಕರೆ ಸರ್ಕಾರಿ ಜಮೀನು ಮಂಜೂರು ಮಾಡಿಸಿದ್ದು, ಇನ್ನೂ 2.5 ಎಕರೆ ಜಮೀನು ಮಂಜೂರಾತಿ ಹಂತದಲ್ಲಿದೆ. ಈ ಜಮೀನಿನಲ್ಲಿ ಸಮುದಾಯ ಭವನ ನಿರ್ಮಾಣ ಹಾಗೂ ಎಲ್‌ಕೆಜಿಯಿಂದ ಪದವಿವರೆಗಿನ ವಿದ್ಯಾ ಸಂಸ್ಥೆ ಪ್ರಾರಂಭಿಸಲು ಕಾರ್ಯಪ್ರವೃತ್ತರಾಗಿದ್ದಾರೆ.ರಾಜಕೀಯ, ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ, ಸಹಕಾರಿ ಮತ್ತು ಕೃಷಿ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿರುವ ಹೇಮನಾಥ ಶೆಟ್ಟಿ ಅವರು ಸಮುದಾಯದ ಅಭಿವೃದ್ಧಿಗೆ ನಿರಂತರ ಶ್ರಮಿಸುತ್ತಿದ್ದಾರೆ.










