ಮೇ.3ರಂದು ನಡೆದ ನೀಟ್ ಯುಜಿ ಪರೀಕ್ಷೆ ರದ್ದು

0

ಪುತ್ತೂರು: ಮೇ 3 ರಂದು ದೇಶಾದ್ಯಂತ ನಡೆಸಲಾದ ನೀಟ್ ಯುಜಿ ಪರೀಕ್ಷೆಯನ್ನು (NEET UG Exam) ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (NTA) ರದ್ದುಗೊಳಿಸಿದೆ.

ಪ್ರಶ್ನೆ ಪತ್ರಿಕೆ ಸೋರಿಕೆಯಾದ ಗಂಭೀರ ಆರೋಪದ ಹಿನ್ನೆಲೆಯಲ್ಲಿ ಎನ್‌ಟಿಎ ಈ ನಿರ್ಧಾರ ಕೈಗೊಂಡಿದ್ದು, ಲಕ್ಷಾಂತರ ವಿದ್ಯಾರ್ಥಿಗಳಿಗೆ ಆಘಾತ ಉಂಟಾಗಿದೆ. ಪರೀಕ್ಷೆಯನ್ನು ರದ್ದುಗೊಳಿಸಿರುವ ಎನ್‌ಟಿಎ, ಶೀಘ್ರದಲ್ಲೇ ಮರು ಪರೀಕ್ಷೆಯ ದಿನಾಂಕವನ್ನು ಪ್ರಕಟಿಸುವುದಾಗಿ ತಿಳಿಸಿದೆ. ಹೊಸ ದಿನಾಂಕ ಮತ್ತು ವೇಳಾಪಟ್ಟಿಯನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು ಎಂದು ಸ್ಪಷ್ಟಪಡಿಸಿದೆ.

LEAVE A REPLY

Please enter your comment!
Please enter your name here