ದೈವದೇವರ ಅವಹೇಳನ ಆರೋಪ : ಕಲಾವಿದರ ವಿರುದ್ಧ ದೂರು

0

ಪುತ್ತೂರು: ಟಿವಿ ಚಾನೆಲ್‌ವೊಂದರ ಕಾರ್ಯಕ್ರಮದಲ್ಲಿ ತುಳುನಾಡಿನ ದೈವಗಳ ಬಗ್ಗೆ ಮತ್ತು ಹಿಂದೂ ಧರ್ಮದ ಸಂಸ್ಕೃತಿಯ ಬಗ್ಗೆ ತೀರಾ ಕೆಳಮಟ್ಟದಲ್ಲಿ ಅಪಹಾಸ್ಯ ಮಾಡಿ ದೈವದೇವರ ಅವಹೇಳನ ಮಾಡಿದ್ದಾರೆಂದು ಆರೋಪಿಸಿ ಕಲಾವಿದರ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.


ಬೆಳಂದೂರು ಗ್ರಾಮದ ಧನ್ಯಕುಮಾರ್ ಟಿ ಅವರು ದೂರು ನೀಡಿದವರು. ನಾನು ನನ್ನ ಮೊಬೈಲ್ ವೀಕ್ಷಿಸುತ್ತಿರುವಾಗ ಒಂದು ವಿಡಿಯೋ ಕಂಡು ಬಂದಿದ್ದು, ಅದರಲ್ಲಿ ಖಾಸಗಿ ಟಿವಿ ಚಾನೆಲ್ ಕಾರ್ಯಕ್ರಮದಲ್ಲಿ ಕಾಳಮ್ಮನ ವಿಚಾರವಾಗಿ ಪ್ರಸ್ತಾಪಿಸಿ ತುಳುನಾಡ ದೈವಗಳ ಬಗ್ಗೆ ಮತ್ತು ಹಿಂದೂ ಧರ್ಮದ ಸಂಸ್ಕೃತಿಯ ಬಗ್ಗೆ ತೀರಾ ಕೆಳಮಟ್ಟದಲ್ಲಿ ಅಪಹಾಸ್ಯ ಮಾಡಿ ದೈವದೇವರ ಅವಹೇಳನ ಮಾಡಿದ್ದು, ಇದನ್ನು ನೋಡಿ ನನ್ನ ಮನಸ್ಸಿಗೆ ತೀವ್ರ ಘಾಸಿಯಾಗಿದ್ದು, ನನ್ನ ಧಾರ್ಮಿಕ ಭಾವನೆಗೆ ಧಕ್ಕೆಯಾಗಿರುತ್ತದೆ. ಆದರಿಂದ ಧಾರ್ಮಿಕ ಭಾವನೆಗೆ ಧಕ್ಕೆಯುಂಟು ಮಾಡಿದವರನ್ನು ವಿಚಾರಣೆಗೆ ಒಳಪಡಿಸಿ ಸೂಕ್ತ ಕಾನುನು ಕ್ರಮ ಕೈಗೊಳ್ಳುವಂತೆ ಅವರು ದೂರಿನಲ್ಲಿ ತಿಳಿಸಿದ್ದಾರೆ.

ಪೊಲೀಸರು ದೂರು ಅರ್ಜಿಯನ್ನು ಸ್ವೀಕರಿಸಿ, ಈ ಕುರಿತು ದೂರು ಅರ್ಜಿಯಲ್ಲಿ ನಮೂದಿಸಿದ ವಿಚಾರದ ಬಗ್ಗೆ ಕೂಲಂಕೂಷವಾಗಿ ಪ್ರಾಥಮಿಕ ತನಿಖೆಯನ್ನು ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹಿಂಬರಹ ನೀಡಿದ್ದಾರೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here