ಗೆಜ್ಜೆಗಿರಿ ಕ್ಷೇತ್ರ ಅಭಿವೃದ್ಧಿ: ಸಚಿವ ಮಧು ಬಂಗಾರಪ್ಪ, ಶಾಸಕ ಅಶೋಕ್ ರೈ ಭೇಟಿಯಾದ ನಿಯೋಗ

0

ಪುತ್ತೂರು: ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಪ್ರಾರಂಭವಾಗಲಿರುವ ದೇಯಿ ಬೈದೆತಿ ಆಯುರ್ವೇದಿಕ್ ಕೇಂದ್ರ ಮತ್ತು ಸಮುದಾಯ ಭವನ ಹಾಗೂ ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳ ಕುರಿತು ಚರ್ಚಿಸಲು ಕ್ಷೇತ್ರದ ಸಮಿತಿ ಮತ್ತು ಅಭಿವೃದ್ಧಿ ಸಮಿತಿಯ ಪದಾಧಿಕಾರಿಗಳ ನಿಯೋಗ ಬೆಂಗಳೂರಿಗೆ ಭೇಟಿ ನೀಡಿತು.

ನಿಯೋಗವು ಕರ್ನಾಟಕ ಸರ್ಕಾರದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹಾಗೂ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರನ್ನು ಭೇಟಿಯಾಗಿ ಕ್ಷೇತ್ರದಲ್ಲಿ ನಡೆಯುತ್ತಿರುವ ಕಾಮಗಾರಿಯ ಪ್ರಗತಿಯ ಬಗ್ಗೆ ಚರ್ಚಿಸಿತು. ಸಚಿವರು ಮತ್ತು ಶಾಸಕರು ಕಾಮಗಾರಿಗಳ ಕುರಿತು ಕೆಲವು ಸಲಹೆಗಳನ್ನು ನೀಡಿ ಸಕಾರಾತ್ಮಕವಾಗಿ ಸ್ಪಂದಿಸಿದರು.

ನಿಯೋಗದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಆಡಳಿತ ಸಮಿತಿ ಗೌರವಾಧ್ಯಕ್ಷ ಪೀತಾಂಬರ ಹೆರಾಜೆ, ಜಯಂತ ನಡುಬೈಲು, ಅಭಿವೃದ್ಧಿ ಸಮಿತಿ ಅಧ್ಯಕ್ಷ ಸಂಜೀವ ಪೂಜಾರಿ ಬಿರ್ವ, ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್, ಉಪಾಧ್ಯಕ್ಷ ದೀಪಕ್ ಕೋಟ್ಯಾನ್, ಆಡಳಿತ ಸಮಿತಿ ಪ್ರಧಾನ ಕಾರ್ಯದರ್ಶಿ ಡಾ. ರಾಜಾರಾಮ್ ಹಾಗೂ ಶಿಲ್ಪ ಶಾಸ್ತ್ರಜ್ಞ ಪ್ರಮಲ್ ಕುಮಾರ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here