ಕೆದಂಬಾಡಿ: ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

0

ಪುತ್ತೂರು: ಕೆದಂಬಾಡಿ ಗ್ರಾಮದ ದರ್ಬೆ ನಿವಾಸಿಯೊಬ್ಬರು ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೇ 17 ರಂದು ನಡೆದಿದೆ.

ದರ್ಬೆ ನಿವಾಸಿ ಜಯಚಂದ್ರ ನಾಯಕ್ (60 ವ.) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಇವರು ಕೆದಂಬಾಡಿ ಗ್ರಾಮದ ದರ್ಬೆ ಎಂಬಲ್ಲಿರುವ ತನ್ನ ಸ್ವಗೃಹದಲ್ಲಿ ನೇಣು ಬಿಗಿದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಮೃತರು ಪತ್ನಿ ಹಾಗೂ ಮೂವರು ಮಕ್ಕಳನ್ನು ಅಗಲಿದ್ದಾರೆ.

ಆತ್ಮಹತ್ಯೆಗೆ ನಿಖರವಾದ ಕಾರಣ ಏನೆಂಬುದು ತಿಳಿದುಬಂದಿಲ್ಲ.ಘಟನಾ ಸ್ಥಳಕ್ಕೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

LEAVE A REPLY

Please enter your comment!
Please enter your name here