






ಬೆಂಗಳೂರು: ಜೂ.1ರಂದು ರಾಜ್ಯಾದ್ಯಂತ ಶಾಲಾ ಪ್ರಾರಂಭೋತ್ಸವ ವಿಜೃಂಭಣೆಯಿಂದ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿದ್ಯಾರ್ಥಿಗಳನ್ನು ಶಾಲೆಗೆ ಸ್ವಾಗತಿಸಲಿದ್ದಾರೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.


ರಾಜ್ಯದ 46 ಸಾವಿರ ಸರ್ಕಾರಿ ಶಾಲೆಗಳ ಮುಖ್ಯೋಪಾಧ್ಯಾಯರು, ಶಿಕ್ಷಕರು ಹಾಗೂ ಡಿಡಿಪಿಐ, ಡಿಡಿಪಿಯು ಹಾಗೂ ಬಿಇಒ ಸೇರಿದಂತೆ ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳನ್ನು ಉದ್ದೇಶಿಸಿ ವಿಡಿಯೋ ಕಾನರೆನ್ಸ್ ಮೂಲಕ ಮಹತ್ವದ ಸಭೆ ನಡೆಸಿದ ಸಚಿವರು, ಜೂ.1ರಂದು ಮುಖ್ಯಮಂತ್ರಿಗಳು ರಾಜ್ಯಾದ್ಯಂತ ಎಲ್ಲಾ ಶಾಲೆಗಳಲ್ಲಿ ಏಕಕಾಲದಲ್ಲಿ ನಡೆಯುವ ಮಹಾ ಪೋಷಕ-ಶಿಕ್ಷಕರ ಸಭೆಯನ್ನು ಉದ್ದೇಶಿಸಿ ವಿಡಿಯೋ ಕಾನರೆನ್ಸ್ ಮೂಲಕ ವಿದ್ಯಾರ್ಥಿಗಳು ಹಾಗೂ ಪೋಷಕರೊಂದಿಗೆ ನೇರ ಸಂವಾದ ನಡೆಸಲಿದ್ದಾರೆ ಎಂದು ತಿಳಿಸಿದರು. ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿಯನ್ನು ಗರಿಷ್ಠ ಮಟ್ಟಕ್ಕೆ ಏರಿಸುವುದು ಮೊದಲ ಆದ್ಯತೆಯಾಗಬೇಕು. ಅನುತ್ತೀರ್ಣರಾದ ವಿದ್ಯಾರ್ಥಿಗಳನ್ನು ಗುರುತಿಸಿ, ಜಾಗೃತಿ ಮೂಡಿಸಿ ಮರಳಿ ಶಾಲೆಗೆ ತರಬೇಕು ಎಂದರು.



ಬಿಸಿಯೂಟ ಯೋಜನೆ:
ಶಾಲಾ ಬಿಸಿಯೂಟ ಯೋಜನೆಯನ್ನು ಅತ್ಯಂತ ಪರಿಣಾಮಕಾರಿಯಾಗಿ ನಿರ್ವಹಿಸಬೇಕು. ಮಕ್ಕಳ ಆರೋಗ್ಯದ ದೃಷ್ಟಿಯಿಂದ ಇದರಲ್ಲಿ ಯಾವುದೇ ರೀತಿಯ ಲೋಪದೋಷಗಳಾಗದಂತೆ ಎಚ್ಚರವಹಿಸುವುದು ಕಡ್ಡಾಯ. ಜತೆಗೆ ಶಾಲಾ ಪ್ರಾರಂಭದಲ್ಲೇ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ, ಸಮವಸ ಸೇರಿದಂತೆ ಎಲ್ಲಾ ಅಗತ್ಯ ಸಾಮಗ್ರಿಗಳನ್ನು ಸಕಾಲದಲ್ಲಿ ವಿತರಿಸಬೇಕು ಎಂದು ತಿಳಿಸಿದರು.
ಶಿವಮೊಗ್ಗದಲ್ಲಿ ಕೆಪಿಎಸ್ ಶಾಲೆಗೆ ಶಂಕುಸ್ಥಾಪನೆ:
ಶಾಲಾ ಪ್ರಾರಂಭೋತ್ಸವದ ಶುಭ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಿವಮೊಗ್ಗದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್) ನೂತನ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಹಾಗೆಯೇ, ರಾಜ್ಯಮಟ್ಟದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗಳಿಗೆ ಅಡಿಗಲ್ಲು ಕಾರ್ಯಕ್ರಮವನ್ನು ನೆರವೇರಿಸಲಿದ್ದಾರೆ ಎಂದು ಮಧು ಬಂಗಾರಪ್ಪ ತಿಳಿಸಿದರು.
ಶಿಕ್ಷಕರಿಗೆ ಬದ್ಧತೆ ಇರಲಿ
ಎಸ್.ಎಸ್.ಎಲ್.ಸಿ ಒಂದು ಅರ್ಹತಾ ಪರೀಕ್ಷೆಯಾಗಿದ್ದು, ಉನ್ನತ ಶಿಕ್ಷಣಕ್ಕೆ ಸೇತುವೆಯಂತಿದೆ. ವಿದ್ಯಾರ್ಥಿಗಳೇ ಕರ್ನಾಟಕದ ಮಾನವ ಸಂಪನ್ಮೂಲದ ಮೂಲಾಧಾರವಾಗಿದ್ದಾರೆ. ಹೀಗಾಗಿ ಎಸ್ಎಸ್ಎಲ್ಸಿ -ಲಿತಾಂಶದ ಸಂಪೂರ್ಣ ಸುಧಾರಣೆಗೆ ಪ್ರತಿಯೊಬ್ಬ ಶಿಕ್ಷಕರು ಬದ್ಧತೆಯಿಂದ ಕೆಲಸ ಮಾಡಬೇಕು ಎಂಬ ಮುಖ್ಯಮಂತ್ರಿಗಳ ಆಶಯವನ್ನು ಸಚಿವರು ಸಭೆಯಲ್ಲಿ ಪುನರುಚ್ಚರಿಸಿದರು










