ಪುತ್ತೂರು: ಬ್ಯಾಂಕ್ ಖಾತೆ ಹ್ಯಾಕ್ – 1.11 ಲಕ್ಷ ರೂ. ವರ್ಗಾವಣೆ, ಪ್ರಕರಣ ದಾಖಲು

0

ಪುತ್ತೂರು: ಬ್ಯಾಂಕ್ ಖಾತೆಯನ್ನು ಹ್ಯಾಕ್ ಮಾಡಿ ಹಣ ವರ್ಗಾವಣೆ ಮಾಡಿರುವ ಕುರಿತು ವ್ಯಕ್ತಿಯೊಬ್ಬರು ನೀಡಿದ ದೂರಿನಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.


ಪುತ್ತೂರು ಪರ್ಲಡ್ಕ ಪಾಂಗ್ಲಾಯಿ ನಿವಾಸಿ ಶಿವಶಂಕರ ಅವರು ಬ್ಯಾಂಕ್ ಖಾತೆಯಲ್ಲಿದ್ದ ಹಣ ಕಳೆದುಕೊಂಡವರು. ಅವರು ಪುತ್ತೂರು ಯೂನಿಯನ್ ಬ್ಯಾಂಕ್ ನಲ್ಲಿ ಖಾತೆ ಹೊಂದಿದ್ದು, ಮೇ 1ರಂದು 51ಸಾವಿರ, ಮೇ 2ರಂದು ರೂ.49ಸಾವಿರ, ಮೇ 3ರಂದು 1500 ಮತ್ತು 10,300 ಹಣವನ್ನು ಅವರ ಖಾತೆಯಿಂದ ಯಾರೋ ಅನುಮತಿ ಇಲ್ಲದೆ ಕಾನೂನು ಬಾಹಿರವಾಗಿ ಬ್ಯಾಂಕ್ ಖಾತೆಯನ್ನು ಹ್ಯಾಕ್ ಮಾಡಿ ಹಣ ವರ್ಗಾವಣೆ ಮಾಡಿಕೊಂಡಿದ್ದಾರೆ.

ಈ ಕುರಿತು ಬ್ಯಾಂಕ್‌ನಲ್ಲಿ ವಿಚಾರಿಸಿದಾಗ ಹಣ ವರ್ಗಾವಣೆಯಾಗಿರುವ ಕುರಿತು ಮಾಹಿತಿ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಅವರು ಸೈಬರ್ ಹೆಲ್ಪ್ ಲೈನ್ ನಂಬರ್‌ಗೆ ಕರೆ ಮಾಡಿ ದೂರು ನೀಡಿದ್ದರು. ಈ ತನಕ ಹಣ ವಾಪಾಸಾಗದ ಹಿನ್ನೆಲೆಯಲ್ಲಿ ಮೇ 15ರಂದು ಅವರು ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here